ಹೂವಿನ ಹಡಗಲಿ

ಬರ ’ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಶಿಸ್ತು ಕ್ರಮ ಬರ : ನೀರು, ಮೇವು ಸಮಸ್ಯೆ ನಿವಾರಣೆಗೆ ಮುನ್ನೆಚ್ಚರಿಕೆ ಕ್ರಮ

ಬರ ’ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ  ಶಿಸ್ತು ಕ್ರಮ ಬರ : ನೀರು, ಮೇವು ಸಮಸ್ಯೆ ನಿವಾರಣೆಗೆ ಮುನ್ನೆಚ್ಚರಿಕೆ ಕ್ರಮ
Disciplinary action for negligence in drought management; precautionary measures to address water a

 ಲೋಕದರ್ಶನ ವರದಿ 

          ಹೂವಿನಹಡಗಲಿ  06 : ತಾಲ್ಲೂಕಿನಾದ್ಯಂತ ಈ ವರ್ಷ ಮಳೆ ಬಾರದ ಹಿನ್ನೆಲೆಯಲ್ಲಿ ಬರ ಪೀಡಿತ ಪ್ರದೇಶವೆಂದು ಘೋಷಿಸಿದ್ದು. ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಸಂಗ್ರಹಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಾ.ಪಂ.ಆಡಳಿತಾಧಿಕಾರಿ ಕೆ.ತಿಮ್ಮಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

          ಇಲ್ಲಿನ ತಾ.ಪಂ ಸಭಾಂಗಣದಲ್ಲಿ ಗುರುವಾರ ನಡೆದ  "ಬರ ನಿರ್ವಹಣೆ " ಮತ್ತು ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಶಿಸ್ತು ಕ್ರಮಕ್ಕೆ ಕೈಗೊಳ್ಳುವುದಕ್ಕೆ ದಾಗಿ ಎಚ್ಚರಿಕೆ ನೀಡಿದರು. ಈ ಭಾಗದ ಜೀವನಾಡಿ ತುಂಗಭದ್ರಾ ನದಿಯ ನೀರು ಮತ್ತು ಸಿಂಗಟಾಲೂರು ಏತನೀರಾವರಿ ಯೋಜನೆಯ ಹಿನ್ನೀರು ಕುಡಿಯಲು ಮಾತ್ರ ಬಳಕೆ ಮಾಡಬೇಕು.

          ಹೊರತು ಎರಡನೇ ಬೆಳೆಗಳಿಗೆ ನೀರು ಹರಿಸುವಂತಿಲ್ಲ , ಮುಂಬರುವ ಬೇಸಿಗೆ ಸಮಯದಲ್ಲಿ ನೀರು ಪೋಲಾಗದಂತೆ  ಕುಡಿವ ನೀರು ಸಮಸ್ಯೆ ಆಗದಂತೆ ನಿರ್ವಹಣೆ ಮಾಡಿ, ಯಾವ ಹಳ್ಳಿಗಳಲ್ಲಿ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ ಎಂದರು. ತಾಲೂಕಿನಲ್ಲಿ  ಗ್ರಾಪಂ ವ್ಯಾಪ್ತಿಯಲ್ಲಿ 13 ಕೊಳವೆ ಬಾವಿ ಬಾಡಿಗೆ ಪಡೆದು ಜನರಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು  ತಾ.ಪಂ .ಇಒ ಪರಮೇಶ್ವರ ಸಭೆಗೆ ಮಾಹಿತಿ ನೀಡಿದರು. 

          ಶುದ್ಧ ಕುಡಿವ ನೀರಿನ ಘಟಕಗಳ ನಿರ್ವಹಣೆ ನಡೆಯುತ್ತಿದೆ, ಘಟಕಗಳ ನಿರ್ವಹಣೆಗಾಗಿ 211.82 ಬಿಡುಗಡೆಯಾಗಿದೆ. ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತಿದ್ದೇವೆಂದು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಕರಣ ಇಲಾಖೆ ಅಧಿಕಾರಿ ಕುಮಾರ  ಸಭೆಗೆ ಮಾಹಿತಿ ನೀಡಿದರು. ಈ ಸಭೆಯಲ್ಲಿ ತಾಲೂಕು ಮುಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪಿಡಿಒಗಳು ಇದ್ದರು. 


ಸುದ್ದಿ ಓದಿ