ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಶಿಸ್ತು ಅವಶ್ಯಕ: ಎ.ಕೆ.ಬಸಣ್ಣವರ
Discipline is essential for success in student life: A.K. Basannavara
ಜಮಖಂಡಿ 12: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಶಿಸ್ತು ಅವಶ್ಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಹೇಳಿದರು.
ನಗರದ ಸಮನ್ವಯಾಧಿಕಾರಿಗಳ ಸಭಾ ಭವನದಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗಾಗಿ ಏರಿ್ಡಸಿದ್ದ ತಾಲೂಕು ಮಟ್ಟದ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು. ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳು ಶಿಸ್ತು ಕಲಿಯುತ್ತಾರೆ. ಇದರಿಂದ ಜೀವನದಲ್ಲಿ ಧೈರ್ಯ, ನಾಯಕತ್ವ ಗುಣಗಳು ಬೆಳೆಯುತ್ತವೆ. ಸರ್ಕಾರ ಒದಗಿಸಿರುವ ಈ ಸೌಲಭ್ಯವನ್ನು ಎಲ್ಲ ವಿದ್ಯಾರ್ಥಿಗಳು ಪಡೆದು ವಿದ್ಯಾರ್ಥಿ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಗೀತ ಗಾಯನ ಸ್ಪರ್ಧೆಯ ಆಯೋಜಕರಾದ ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಮಹಾವೀರ ಜಮಖಂಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ. ಸ್ಪರ್ಧೆಯ ಉದ್ದೇಶ ಮತ್ತು ನಿಯಮಗಳ ಕುರಿತು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಣ ಪರೀವೀಕ್ಷಕಿ ಪಿ.ಎಸ್. ನಂದೇಶ ಹಾಗೂ ತಾಲೂಕು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಭೋಸಲೆ ಭಾಗವಹಿಸಿದ್ದರು. ಎಸ್.ಬಿ. ಬೆಳ್ಳಿಕಟ್ಟಿ ಸ್ವಾಗತಿಸಿದರು. ಎಸ್.ಎಸ್. ಕುಂಬಾರ ನಿರೂಪಿಸಿದರು. ಕೆ.ಎಲ್. ಮಾಳಿ ವಂದಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 