ನಾಳೆ ಎಸ್ಸಿ ಎಸ್ಟಿ ಒಬಿಸಿ ಮೀಸಲಾತಿ ಕುರಿತು ಸಂವಾದ : ಕೊಪ್ಪಳಕ್ಕೆ ಉಗ್ರ್ಪ ಆಗಮನ
Discussion on SC, ST, OBC reservation tomorrow: Terrorist arrives in Koppal
ಕೊಪ್ಪಳ 22: ನಗರದಲ್ಲಿ ಇದೇ ದಿನಾಂಕ 24ರ ರವಿವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಪ್ರವಾಸಿ ಮಂದಿರದಲ್ಲಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಮೀಸಲಾತಿ ಕುರಿತು ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮ ಜರುಗಲಿದೆ ಮಾಜಿ ಸಂಸದ ಹಾಗೂ ಹಿರಿಯ ರಾಜಕೀಯ ನಾಯಕ ವಿ, ಎಸ್ ಉಗ್ರ್ಪ ಕೊಪ್ಪಳಕ್ಕೆ ಆಗಮಿಸಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಡಾ, ಕೆ ,ಎನ್, ಪಾಟೀಲ್ ತಿಳಿಸಿದರು, ಅವರು ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ದಲ್ಲಿ ಏರಿ್ಡಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ಕುರಿತು ಹೇಳಿಕೆ ನೀಡಿದ ಅವರು ಕರ್ನಾಟಕದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರಿಗೆ ಮೀಸಲಾತಿಯಲ್ಲಿ ಸೂಕ್ತವಾದ ನ್ಯಾಯ ದೊರಕುವಂತೆ ಹಾಗೂ ಮೀಸಲಾತಿ ವಿಷಯ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕುರಿತು ಸರ್ಕಾರಕ್ಕೆ ಒತ್ತಾಯಿಸಲು ಈ ಸಂವಾದ ಕಾರ್ಯಕ್ರಮ ನಡೆಯಲಿದೆ ಇದರಲ್ಲಿ ಮೀಸಲಾತಿ ವಿಷಯ ಕುರಿತು ಮಾಜಿ ಸಂಸದ ವಿ ಎಸ್ ಉಗ್ರ್ಪ ನವರು ಸಂಪೂರ್ಣ ಮಾಹಿತಿ ನೀಡುವುದರ ಜೊತೆಗೆ ಸರಕಾರಕ್ಕೆ ಮನವರಿಕೆ ಮಾಡಿ ಒತ್ತಾಯಿಸಲು ಅವರು ಕೊಪ್ಪಳದ ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದ್ದರು,
ಮುಂದುವರಿದು ಮಾತನಾಡಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಹಾಗೂ ಮೀಸಲಾತಿಗೆ ಕಾನೂನಾತ್ಮಕ ಭದ್ರತೆ ಒದಗಿಸಲು ಅದನ್ನು 9ನೇ ಶೆಡ್ಯೂಲ್ ಗೆ ಸೇರಿಸುವುದು ಅತ್ಯಂತ ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಮುಂದಿನ ಕಾನೂನು ಹೋರಾಟ ಮತ್ತು ಜಾಗೃತಿ ಮೂಡಿಸಲು ವಿಚಾರ ಸಂಕೀರ್ಣ ದಿನಾಂಕ 24ರ ರವಿವಾರ ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಏರಿ್ಡಸಲಾಗಿದ್ದು ಸಂಬಂಧಿಸಿದ ಸಮುದಾಯದ ಪ್ರತಿಯೊಬ್ಬರು ಇದರಲ್ಲಿ ಪಾಲ್ಗೊಂಡು ಈ ವಿಚಾರ ಸಂಕೀರ್ಣ ಹಾಗೂ ಸಂವಾದ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಾಲ್ಮೀಕಿ ಮಹಾಸಭಾದ ಅಧ್ಯಕ್ಷರಾದ ಡಾ, ಕೆ, ಎನ್ ಪಾಟೀಲ್ ಸಮುದಾಯದ ಜನರಿಗೆ ಕರೆ ನೀಡಿದರು, ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಟಿ, ರತ್ನಾಕರ್ ಕುಕನೂರ್, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ, ರಾಮಣ್ಣ ಕಲ್ಲಾನವರ್ ,ರಾಜ್ಯ ಸಂಚಾಲಕ ಮಂಜುನಾಥ ಗೊಂಡಬಾಳ ,ನ್ಯಾಯವಾದಿ ಶಿವ ರೆಡ್ಡಿ ನಾಯಕ್ ಕಾರಟಗಿ ಹಾಗೂ ಕಾರಟಗಿಯ ಧರ್ಮದರ್ಶಿ, ಗದ್ಯಪ್ಪ ನಾಯಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 