ವಿಜಯಪುರ

ಜಾತ್ರೆ ಸಿದ್ಧತೆ, ಹಣಕಾಸು ಯೋಜನೆ ಕುರಿತು ಚರ್ಚೆ

ಜಾತ್ರೆ ಸಿದ್ಧತೆ, ಹಣಕಾಸು ಯೋಜನೆ ಕುರಿತು ಚರ್ಚೆ


ದೇವರಹಿಪ್ಪರಗಿ 08 : ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರದಂದು ಪ.ಪಂ ಅಧ್ಯಕ್ಷೆ ಜಯಶ್ರೀ ದೇವಣಗಾಂವ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಹಾಗೂ ಪ.ಪಂ ಮುಖ್ಯಾಧಿಕಾರಿ ಅಪ್ರೋಜ ಅಹ್ಮದ ಪಟೇಲ ಅವರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಪಟ್ಟಣದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ 16ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆ ತಯಾರಿಸುವ ಕುರಿತು ಪ್ರಮುಖವಾಗಿ ಚರ್ಚೆ ನಡೆಸಲಾಯಿತು.

ಇದೇ ವೇಳೆ ಪಟ್ಟಣದ ಐತಿಹಾಸಿಕ   ಮಲ್ಲಯ್ಯ ರಾವುತರಾಯ ಜಾತ್ರೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸ್ವಚ್ಛತಾ ಕಾರ್ಯಗಳು, ಜಾತ್ರಾ ಪ್ರದೇಶದಲ್ಲಿ ಪೌಡರ್ ಹಾಕುವುದು, ನೈರ್ಮಲ್ಯ ಕಾಪಾಡುವುದು ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಜಾತ್ರೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ವಿವಿಧ ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಾತ್ರೆಯ ಸಂದರ್ಭದಲ್ಲಿ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸಮರ​‍್ಕವಾಗಿ ಕೈಗೊಳ್ಳುವ ಕುರಿತು ಸದಸ್ಯರು ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಮುಖ್ಯಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 


ಸುದ್ದಿ ಓದಿ