ಜೆಇಇ ಅಡ್ವಾನ್ಸ್ಡ್ನಲ್ಲಿ ದಿಶಾ ಮೇಲೀನಮನಿ ಸಾಧನೆ
Disha Melinamani's performance in JEE Advanced
ಜಮಖಂಡಿ 13 : ಐಐಟಿ, ಎನ್‌ಐಟಿ ಹಾಗೂ ಐಐಐಟಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಬಿ.ಇ ಹಾಗೂ ಬಿ.ಟೆಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಜರುಗಿಸಿದ್ದ ಜೆಇಇ ಅಡ್ವಾನ್ಸ್‌ಡ ಪರೀಕ್ಷೆಯಲ್ಲಿ ಮೂಡಬಿದರೆಯ ವಿದ್ಯಾಶಾರದ ಅಕಾಡೆಮಿಯ ಸಹಯೋಗದ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿಶಾ ಮೇಲಿನಮನಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ಆಲ್ ಇಂಡಿಯಾ ರಾ್ಯಂಕಿಂಗ್ನ ಕ್ಯಾಟಗರಿ ವಿಭಾಗದಲ್ಲಿ 4345ನೇ ರಾ್ಯಂಕ್ನೊಂದಿಗೆ ಉತ್ತೀರ್ಣರಾಗಿದ್ದಾರೆ. ಜೆಇಇ ಮೇನ್ಸ್ ಪರೀಕ್ಷೆಯಲ್ಲಿ 70.88 ಪರ್ಸೆಂಟೈಲ್‌ನೊಂದಿಗೆ ಜೆಇಇ ಅಡ್ವಾನ್ಸ್‌ಡ ಪರೀಕ್ಷೆಗೆ ಅರ್ಹತೆಯನ್ನು ಪಡೆದಿದ್ದನ್ನು ಸ್ಮರಿಸಬಹುದು. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಗೀರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ, ಉಪಪ್ರಾಚಾರ್ಯ ಶ್ರೀಕಾಂತ ಬೆಳ್ಳಿಹಾಳ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ತಮ್ಮ ಹರ್ಷ ವ್ಯಕ್ತಪಡಿಸಿದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 