ಅತೀ ಶೀಘ್ರವಾಗಿ ವಿಚಾರಣೆಗಳನ್ನು ಇತ್ಯರ್ಥ: ಮಾಹಿತಿ ಆಯೋಗದ ಆಯುಕ್ತರು ಶ್ರೀ ಪ್ರಕಾಶ ನಾರಾಯಣ ಚನ್ನಾಳ
Dispose of inquiries as soon as possible: Information Commission Commissioner Shri Prakash Narayan C
ಬೆಳಗಾವಿ, ಮೇ.15: ರಾಜ್ಯ ಮಾಹಿತಿ ಆಯೋಗ ಬೆಳಗಾವಿ ಪೀಠ ಪ್ರಾರಂಭವಾದ ವರ್ಷದಿಂದ ಸ್ವೀಕೃತವಾದ ಮೇಲ್ಮನವಿಗಳ ವಿಚಾರಣೆ ನಡೆಸಿ ಮಾಹಿತಿ ನೀಡುವಲ್ಲಿ ಕರ್ತವ್ಯ ಲೋಪ ಎಸಗಿದ ಮತ್ತು ಆಯೋಗದ ಮೇಲ್ಮನವಿ ವಿಚಾರಣೆಗಳ ನೋಟಿಸಿಗೆ ಸ್ಪಂದನೆ ನೀಡದೆ ಗೈರು ಹಾಜರಾದ ಕಾರಣ ಇಲ್ಲಿಯವರೆಗೆ ಬೆಳಗಾವಿ ವಿಭಾಗದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ 135 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ ಮತ್ತು 94 ಪ್ರಕರಣಗಳಲ್ಲಿ ಮೇಲ್ಮನವಿದಾರರಿಗೆ ಪರಿಹಾರದ ಆದೇಶಗಳನ್ನು ಸಹ ಹೊರಡಿಸಲಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದರು.
ತಾವು ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟು 4098 ಪ್ರಕರಣಗಳನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿ 1600 ಪ್ರಕರಣಗಳನ್ನು ವಿಲೇವಾರಿ ಮಾಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ ಮತ್ತು ಏಪ್ರೀಲ್ ತಿಂಗಳಲ್ಲಿ ಒಟ್ಟು 1112 ಮೇಲ್ಮನವಿ ಪ್ರಕರಣಗಳ ವಿಚಾರಣೆ ತೆಗೆದುಕೊಂಡಿದ್ದು ಅತೀ ಶೀಘ್ರವಾಗಿ ವಿಚಾರಣೆಗಳನ್ನು ಇತ್ಯರ್ಥ ಮಾಡಲಾಗುವದು ಎಂದು ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳಿಗೆ ಮೇಲ್ಮನವಿದಾರರ ಅರ್ಜಿಗಳಿಗೆ ಸ್ಪಂದಿಸಿ ಕಾಲಮಿತಿಯೊಳಗೆ ಸರಿಯಾದ ಮಾಹಿತಿ ನೀಡಲು ತಿಳಿಸಿರುತ್ತಾರೆ. ಮಾಹಿತಿ ನೀಡದೆ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ ಜರುಗಿಸಿ ವಿಚಾರಣೆಗೆ ಶಿಫಾರಸ್ಸು ಮತ್ತು ದಂಡ ವಿಧಿಸಲಾಗುವದು ಎಂದು ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯೋಗ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 