ಬಳ್ಳಾರಿ

ಬಳ್ಳಾರಿ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ

ಬಳ್ಳಾರಿ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ

ಬಳ್ಳಾರಿ 05: ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲಾಗುತ್ತಿದ್ದು, ಮುಜರಾಯಿ ವ್ಯಾಪ್ತಿಯ ಬಳ್ಳಾರಿ ಶ್ರೀ ಕನಕದುರ್ಗಮ್ಮ ದೇವಸ್ಥಾನ,ಶ್ರೀ ಕುಮಾರಸ್ವಾಮಿ ದೇವಸ್ಥಾನ, ಶ್ರೀ ಕೋಟೆ ಮಲ್ಲೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವ್ರತವಾದ ಶುಕ್ರವಾರದಂದು ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸಿದ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುತ್ತಿರುವುದು ಕಂಡುಬಂದಿತು. 

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸುತ್ತೋಲೆ ಅನ್ವಯ ಮುಜರಾಯಿ ದೇವಸ್ಥಾನಗಳಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಾಲಯಗಳಿಗೆ ಆಗಮಿಸಿದ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ನೀಡುತ್ತಿರುವುದು ಕಂಡುಬಂದಿತು. 

ಇಲಾಖೆಯ ಸುತ್ತೋಲೆ ಅನ್ವಯ ದೇವಸ್ಥಾನಕ್ಕೆ ದರ್ಶನಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ನೀಡಲಾಗುತ್ತಿದೆ ಎಂದು ಶ್ರೀ ಕನಕದುರ್ಗಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ. 


ಸುದ್ದಿ ಓದಿ