ಕಾರವಾರ

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಪಿಪಿಇ ಕಿಟ್ ವಿತರಣೆ

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಪಿಪಿಇ ಕಿಟ್ ವಿತರಣೆ

ಬನವಾಸಿ 18: ಬನವಾಸಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಸುರಕ್ಷತೆಗಾಗಿ ವಿ.ಆರ್‌. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‌ ವತಿಯಿಂದ  ಸ್ಥಳೀಯ  ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಪಿಪಿಇ ಕಿಟ್‌ಗಳನ್ನು ವಿತರಿಸಲಾಯಿತು. 

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಜಯಶ್ರೀ ಹೆಗಡೆ,  ಬನವಾಸಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸಿ.ಎಫ್ ನಾಯ್ಕ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯ್ಕ್‌, ಮಾಜಿ ಜಿಪಂ ಸದಸ್ಯ ಬಸವ ದೊಡಮನಿ, ಜಿಲ್ಲಾ ಮಹಿಳಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪಾಟೀಲ, ಶಿವಾಸಿ ಬನವಾಸಿ, ಮಧುಕೇಶ್ವರ ನಾಯ್ಕ್‌, ರಾಘವೇಂದ್ರ ನಾಯ್ಕ್‌, ಪ್ರಸನ್ನ ನಾಯ್ಕ್‌ ಮತ್ತಿತರರು ಉಪಸ್ಥಿತರಿದ್ದರು.    

ಸುದ್ದಿ ಓದಿ