ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ಪತ್ರ ವಿತರಣೆ
ಕಂಪ್ಲಿ 04 : ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಯೋಜನೆಯ ತಾಲ್ಲೂಕು ಕಚೇರಿಯಲ್ಲಿ ಸುಜ್ಞಾನ ನಿಧಿ ಯೋಜನೆಯ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ರೋಹಿತಾಕ್ಷ ಅವರು, ತಾಲ್ಲೂಕಿನ ಯೋಜನೆಯ ಪಾಲುದಾರರ ಕುಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಪ್ರತಿ ವರ್ಷ ಕರ್ನಾಟಕ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ (ಸ್ಕಾಲರ್ಶಿಪ್ ) ಮಂಜೂರಾತಿ ಮಾಡಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 118000 ಸಾವಿರ ವಿದ್ಯಾರ್ಥಿಗಳಿಗೆ 32.44 ಕೋಟಿಯಷ್ಟು ಮೌಲ್ಯದ ವಿದ್ಯಾರ್ಥಿ ವೇತನ ಒದಗಿಸಲಾಗಿದೆ. ಪರಮ ಪೂಜ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆ ಬೆಳ್ಳಿ ಹಬ್ಬದ ಪ್ರಯುಕ್ತ ರೂಪಿಸಿರುವ ಸುಜ್ಞಾನನಿಧಿ ಶಿಷ್ಯ ವೇತನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಡೆಸಿಕೊಂಡು ಬರುತ್ತಿದೆ.. ಪ್ರಸ್ತುತ ವರ್ಷ ಮಂಜೂರಾತಿಗೊಂಡ 44 ಜನ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಗುತ್ತಿದೆ ಎಂದ ಅವರು ಯೋಜನೆಯ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ವೀರಶೈವ ತಾಲೂಕು ಅಧ್ಯಕ್ಷರಾದ ಎಸ್.ಎಂ. ನಾಗರಾಜ..ಡಿ. ಮೌನೇಶ್ ಡಿ. ಶ್ರೀಧರ ಶೆಟ್ಟಿ ,ಜಿಲ್ಲಾ ಜನ ಜಾಗೃತಿ ವೇದಿಕೆ ಕೋಶಾಧಿಕಾರಿಗಳಾದ ವೆಂಕಟೇಶ್ ಬರಮಕ್ಕನವರ, ರಾಮಾಂಜನೇಯ, ಜನ ಜಾಗೃತಿ ವೇದಿಕೆ ಸದಸ್ಯರು,ಹಾಗೂ ಸಂಸ್ಥೆಯ ತಾಲೂಕಿನ ಯೋಜನಾಧಿಕಾರಿಗಳಾದ ಎಲ್. ರಾಘವೇಂದ್ರ,ಕೃಷಿ ಅಧಿಕಾರಿಗಳಾದ ಸಂಜುಕುಮಾರ್ ವಲಯದ ಮೇಲ್ವಿಚಾರಕರಾದ ಮಂಜುನಾಥ್ ಸೇರಿದಂತೆ ಸಂಸ್ಥೆಯ ಸ್ವಸಹಾಯ ಸಂಘಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.