ವಿಜಯಪುರ

ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರಿಗೆ ಗಣತಿ ನಮೂನೆ ವಿತರಣೆ

ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರಿಗೆ ಗಣತಿ ನಮೂನೆ ವಿತರಣೆ

ಲೋಕದರ್ಶನ ವರದಿ 

ವಿಜಯಪುರ 30: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಿದರು.  

ಮನೆ-ಮನೆಗೆ ತೆರಳಿ ಮತದಾರರ ವಿವರ ಸಂಗ್ರಹ ಹಾಗೂ ಗಣತಿ ನಮೂನೆ ವಿತರಣೆ ಕಾರ್ಯ ಜಿಲ್ಲಾದ್ಯಂತ ನಡೆಯುತ್ತಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.  ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ