ಕಪ್ಪುಗಲ್ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
Distribution of educational materials to the students of Kappugal Govt
ಬಳ್ಳಾರಿ 10: ಸೇವಾ ಸಮಿತಿಯ ವತಿಯಿಂದ ಕಪ್ಪುಗಲ್ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಹಾಗೂ ಬಿಡಿಸಿಸ್ಘಿಐ ಸಂಸ್ಥೆಯ ಅಧ್ಯಕ್ಷರು ಯಶವಂತರಾಜ್ ನಾಗಿರೆಡ್ಡಿ ಅವರುಗಳ ನೇತೃತ್ವದಲ್ಲಿ ಶೈಕ್ಷಣಿಕ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ನಂತರ ಶೋಭಾ ರಾಣಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಈ ಶೈಕ್ಷಣಿಕ ಸಹಾಯವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಿ, ಉತ್ತಮ ಶಿಕ್ಷಣದತ್ತ ಮುನ್ನಡೆಯಲು ನೆರವಾಗಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟು ಪುಸ್ತಕಗಳು, ಪೆನು, ಪೆನ್ಸಿಲ್, ಶಾರ್ನರ್, ಈರೆಸರ್, ಸ್ಕೇಲ್, ಬಾಕ್ಸ್, ಬೋರ್ಡ್ ಮತ್ತು ಇತರ ಶೈಕ್ಷಣಿಕ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಬಳ್ಳಾರಿ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕುಮಾರ ಬಫಾನ್, ಕಾರ್ಯದರ್ಶಿ ವಿ. ರಾಮಚಂದ್ರ, ಜಯ ಪ್ರಕಾಶ ಗುಪ್ತಾ, ಸ್ಪಾಂಜ್ ಐರನ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್ ರಾವು (ವಾಸು) ಮತ್ತು ಸರ್ಕಾರಿ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕ ವರ್ಗ ಹಾಜರಿದ್ದು, ಮಕ್ಕಳಿಗೆ ಪ್ರೋತ್ಸಾಹ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 