ಕ್ಷಯರೋಗಿಗೆ ಆಹಾರ್ ಕಿಟ್ ವಿತರಣೆ
Distribution of food Kit to Tuberculosis patients
ಹಾವೇರಿ 08: ಸಂಘ ಸಂಸ್ಥೆಗಳು, ಖಾಸಗಿ ಉದ್ಯಮಗಳು, ಚುನಾಯಿತ ಪ್ರತಿನಿಧಿಗಳು, ಕೈಗಾರಿಕೆಗಳ ಮಾಲಿಕರು, ನಿಕ್ಷಯ ಮಿತ್ರರಾಗಿ ಕ್ಷಯರೋಗಿಗಳನ್ನು ದತ್ತು ಪಡೆದು ಚಿಕಿತ್ಸೆ ಮುಗಿಯವವರಿಗೆ ಪೌಷ್ಠಿಕ ಆಹಾರದ ಕಿಟ್‌ಗಳನ್ನು ನೀಡಲು ಮುಂದಾಗಬೇಕು. ಇದರಿಂದ ಕ್ಷಯರೋಗಿಗಳು ಗುಣಮುಖರಾಗಲು ಸಹಕಾರಿಯಾಗುತ್ತದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಚಿಕಿತ್ಸೆ ನಿರತ ಕ್ಷಯರೋಗಿಯನ್ನು ದತ್ತು ಪಡೆದು, ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಪೂರ್ಣಗೊಳಿಸುವವರೆಗೆ ನಿಕ್ಷಯ ಮಿತ್ರರಾಗಿ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 