ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಬಳ್ಳಾರಿ 19: ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಬಳ್ಳಾರಿ ನಗರದ ಅಂದ್ರಾಳ್ ಹಾಗೂ ಇಂದಿರಾ ನಗರದ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಮಂಡಳಿಯಲ್ಲಿ ನೊಂದಣಿಯಾದ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಸೋಮವಾರ ನಡೆಯಿತು.
ಕೋವಿಡ್ನಿಂದಾಗಿ ಕೆಲಸ ಇಲ್ಲದೆ ಸಂಕಷ್ಟದಲ್ಲಿರುವ ಕಾರ್ಮಿಕರ ಜೀವನ ನಿರ್ವಹಣೆಗೆ ಮಂಡಳಿ ವತಿಯಿಂದ ಆಹಾರ ಸಾಮಗ್ರಿ ಕಿಟ್ಗಳನ್ನು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಳ್ಳಾರಿಯ ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರ್ಪ ಅವರ ಮುಖಾಂತರ ಸುಮಾರು 2 ಸಾವಿರ ಆಹಾರ ಸಾಮಗ್ರಿ ಕಿಟ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ರಾಮಾಂಜಿನೇಯಲು, ಜಿಲ್ಲಾ ಪಂಚಾಯತಿ ಸದಸ್ಯರಾದ ಪ್ರಶಾಂತ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಅಲ್ತಾಪ್ ಅಹಮ್ಮದ್, ಕಾರ್ಮಿಕ ನೀರೀಕ್ಷಕರಾದ ರಾಜೇಶ್, ರವಿದಾಸ್ ಮತ್ತು ಇತರರು ಇದ್ದರು.