ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ
ಲೋಕದರ್ಶನ ವರದಿ
ಬಳ್ಳಾರಿ, ಮಾ.20: ಕರ್ನಾಟಕ ಆರ್ಯವೈಶ್ಯ ಮಹಾಸಭಾ ಬೆಂಗಳೂರು, ಬಳ್ಳಾರಿ ಜಿಲ್ಲಾ ಸಮಿತಿಯ ವತಿಯಿಂದ ನಗರದ ಕನ್ಯಕಾ ಪರಮೇಶ್ವರ ದೇವಸ್ಥಾನ ಬೀದಿಯಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಆರ್ಯವೈಶ್ಯ ಅಸೋಸಿಯೇಷನ್‌ನ ಅಧ್ಯಕ್ಷರಾದ ಡಾ. ರಮೇಶ್ ಗೋಪಾಲ್, ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಗಾದೆಂ ಗೋಪಾಲಕೃಷ್ಣ, ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಕಾರ್ಯಕಾರಿ ಸಮಿತಿ ಸದಸ್ಯರಾದ ಜೆ.ಸಿ.ಶ್ರೀಧರ್, ಜಯಂತಿ, ಕಿಶೋರ್, ಕಂಪ್ಲಿ ಜಿ. ರಾಜಾರಾವ್, ಬಳ್ಳಾರಿ ಜಿಲ್ಲಾಧ್ಯಕ್ಷರಾದ ಹೆಚ್.ಆರ್.ಬಾಲನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ಹನುಮಂತಯ್ಯ ಸಿರುಗುಪ್ಪ, ಗುಲ್ಬರ್ಗಾ ವಲಯ ಉಪಾಧ್ಯಕ್ಷ ನಾಮ ನಾಗರಾಜ್ ಬಳ್ಳಾರಿ ಇವರುಗಳು ಉಪಸ್ಥಿತರಿದ್ದರು.