ಕ್ಷಯರೋಗಿಗಳಿಗೆ ಉಚಿತ ರೇಷನ್ ಕಿಟ್ ವಿತರಣೆ
ಬಳ್ಳಾರಿ,ಸೆ.07: ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಅಧ್ಯಕ್ಷರು ಆಗಿರುವ ರಾಜ್ಯದ ರಾಜ್ಯಪಾಲರು ಇವರ ಕಚೇರಿಯಿಂದ ನಿ-ಕ್ಷಯ ಮಿತ್ರಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಪೌಷ್ಟಿಕ ಆಹಾರಧಾನ್ಯ(ರೇಷನ್ ಕಿಟ್) ಉಚಿತವಾಗಿ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಹಯೋಗದೊಂದಿಗೆ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಸೆಪ್ಟಂಬರ್ ತಿಂಗಳ ಮಾಸಿಕ ರೇಷನ್ ಕಿಟ್ಗಳನ್ನು ಸೋಮವಾರದಂದು ನಗರದ ಮಿಲ್ಲರ್ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿತರಿಸಲಾಯಿತು.
ಮಹಾನಗರ ಪಾಲಿಕೆ ಸದಸ್ಯ ಇಬ್ರಾಹಿಂಬಾಬು ಅವರು ರೇಷನ್ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ, ಮಿಲ್ಲರಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಎಂಒ ಡಾ.ಹನುಮಂಪ್ಪ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಉಪಸಭಾಪತಿ ಡಾ.ಎಸ್.ಜೆ.ವಿ.ಮಹಿಪಾಲ್, ಕಾರ್ಯದರ್ಶಿ ಎಂ.ಎ.ಷಕೀಬ್ ಹಾಗೂ ಇತರರು ಉಪಸ್ಥಿತರಿದ್ದರು.