ಕಾರವಾರ

ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಣೆ

ಬನವಾಸಿ 04:  ಕರ್ನಾಟಕ ಪ್ರದೇಶ ಕಾಂಗ್ರೆಸ್  ಶಿಸ್ತು  ಸಮಿತಿಯ ಸಂಚಾಲಕಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತಾ ಆಳ್ವಾ ಅವರ ಆಳ್ವಾ ಫೌಂಡೇಶನ್ ವತಿಯಿಂದ ಕೊರೊನಾ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಲಾಯಿತು.      

ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್ ನಾಯ್ಕ್‌ ಅವರು ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಿಸಿದರು.ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಜಯಶ್ರೀ ಹೆಗಡೆ, ನ್ಯಾಯವಾದಿ ಸತೀಶ್ ನಾಯ್ಕ್‌, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧಾಕರ ನಾಯ್ಕ್‌, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಲತಾ ಕಾಳೆರಮನೆ, ದೀಪಕ್ ಬಂಗಲೆ, ಪುಟ್ಟಪ್ಪ ನಾಯ್ಕ್‌, ಶಿವಾಜಿ ಬನವಾಸಿ ಆಶಾ ಕಾರ್ಯಕರ್ತರು ಇದ್ದರು. 


ಸುದ್ದಿ ಓದಿ