ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ
Distribution of laptops to village administration officials
ಯರಗಟ್ಟಿ, 28 : ಕಂದಾಯ ಯೋಜನೆ ಅನುಷ್ಠಾನಗೊಳಿಸುವ ಉದ್ದೇಶದಿಂದ ಕಂದಾಯ ಇಲಾಖೆಯಲ್ಲಿ ಪ್ರಸ್ತುತ ನಿರ್ವಹಿಸುತ್ತಿರುವ ವಿವಿಧ ಐಟಿ ವ್ಯವಸ್ಥೆಗಳನ್ನು ಬಗರ್ ಹುಕುಂ ತಂತ್ರಾಂಶ, ಫೋಡಿ ಪ್ರಕರಣ (1-5 ಮತ್ತು 6-10) ತಂತ್ರಾಂಶ, ಪಹಣಿ ದಾಖಲೆಗಳೊಂದಿಗೆ ಆಧಾರ ಜೋಡಣೆ, ಸರ್ಕಾರಿ ಜಮೀನುಗಳ ಸಂರಕ್ಷಣೆ, ಲ್ಯಾಂಡ್ ಬಿಟ್ ಯೋಜನೆಯಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುವ ಸಲುವಾಗಿ ಬೆಳಗಾವಿ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಒಟ್ಟು 264 ಕ್ರೋಮಬುಕ್ ಲ್ಯಾಪ ಟಾಪ್ ಗಳನ್ನು ಕಂದಾಯ ಇಲಾಖೆಯಿಂದ ಹಂಚಿಕೆ ಮಾಡಲಾಗಿದ್ದು ಅವುಗಳ ಪೈಕಿ 09 ಕ್ರೋಮಬುಕ್ ಲ್ಯಾಪ ಟಾಪ್‌ಗಳನ್ನು ಯರಗಟ್ಟಿ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಶಾಸಕ ವಿಸ್ವಾಸ ವೈದ್ಯ ಹೇಳಿದರು.
ಈ ವೇಳೆಯಲ್ಲಿ ತಹಶೀಲ್ದಾರ ಎಂ ವ್ಹಿ. ಗುಂಡಪ್ಪಗೋಳ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಕಂದಾಯ ನೀರೀಕ್ಷಕ ವಾಯ್ ಎಫ್. ಮುರ್ತೇನ್ನವರ, ಎಲ್ಲ ಗ್ರಾಮ ಆಡಳಿತಾಧಿಕಾರಿಗಳು ಪಟ್ಟಣ ಪಂಚಾಯತ ಸದಸ್ಯ ನಿಖಿಲ ಪಾಟೀಲ, ಸಲೀಂಬೇಗ ಜಮಾದಾರ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸವರ, ಪ್ರಕಾಶ ವಾಲಿ, ಗೋಪಾಲ ದಳವಾಯಿ, ಗಿಡ್ಡಪ್ಪ ಖಂಡ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 