ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಲೋಕದರ್ಶನ ವರದಿ
ಬೈಲಹೊಂಗಲ 08: ತಾಲೂಕಿನ ಬುಡರಕಟ್ಟಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬೆಂಗಳೂರಿನ ಹಿತ್ತರಹಳ್ಳಿ ಓಂಕಾರ ಸೇವಾ ಟ್ರಸ್ಟ್ ಹಂದ್ರಹಳ್ಳಿ ಸಂಸ್ಥೆಯವರು ಉಚಿತ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿ ವಿತರಿಸಿದರು.
ಸಂಸ್ಥೆಯ ಅಧ್ಯಕ್ಷ ಮುನಿಯಪ್ಪ ಮಾತನಾಡಿ, ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದ್ದು ಮಾತ್ರವಲ್ಲದೇ ಪೋಷಕರದ್ದು ಆಗಿದೆ. ಕಾರಣ ತಂದೆ ತಾಯಂದಿರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಪ್ರಜ್ಞಾವಂತ ನಾಗರೀಕರನ್ನಾಗಿ ಮಾಡಬೇಕು ಎಂದರು.
ಸಂಸ್ಥೆಯ ಉಪಾಧ್ಯಕ್ಷೆ ಲಕ್ಷ್ಮೀ ಬಂಡಿವಡ್ಡರ, ಸಮಾಜ ಸೇವಕ ಪ್ರಭಾಕರ ಭಜಂತ್ರಿ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಇದ್ದರು.