ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ
ಮುಂಡಗೋಡ: ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮಂಗಳವಾರ ಇಲ್ಲಿಯ ನಗರ ಸಭಾ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ದಿ ಇಲಾಖೆ ಶಿಶು ಅಭಿವೃದ್ದಿ ಯೋಜನೆಯಡಿ ಅಂಗವಿಕಲರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಅಪೌಷ್ಟಿಕ ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್ ಪಾಟೀಲ, ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಲ್.ಟಿ ಪಾಟೀಲ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡ ಪಾಟೀಲ, ಬಿಜೆಪಿ ತಾಲೂಕಾಧ್ಯಕ್ಷ ನಾಗಭೂಷಣ ಹಾವಣಗಿ, ದುರೀಣ ಸಂತೋಷ ರಾಯ್ಕರ ಮುಂತಾದವರು ಉಪಸ್ಥಿತರಿದ್ದರು.