ರೇಷ್ಮೆ ಬೆಳೆಗಾರರಿಗೆ ಆಧುನಿಕ ಸಲಕರಣೆ ವಿತರಣೆ: ರೈತರ ಆರ್ಥಿಕ ಸಬಲೀಕರಣಕ್ಕೆ ಶಾಸಕ ವಿಶ್ವಾಸ ವೈದ್ಯ
Distribution of modern equipment to sericulture farmers: MLA Vishwas Vaidya confident of economic em
ಸವದತ್ತಿ 08 : ರೇಷ್ಮೆ ಕೃಷಿಯು ರೈತರ ಆರ್ಥಿಕ ಭದ್ರತೆಗೆ ಭದ್ರ ಬುನಾದಿಯಾಗಿದೆ. ತಾಲೂಕಿನ ರೈತರು ಕೃಷಿಯೊಂದಿಗೆ ರೇಷ್ಮೆ ಉಪಕಸುಬನ್ನು ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿಸಿದ್ದಾರೆ. ರೈತರ ಆರ್ಥಿಕ ಪ್ರಗತಿಗೆ ಪೂರಕವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳು ನೇರವಾಗಿ ಅವರಿಗೆ ತಲುಪಬೇಕು ಎಂಬುದು ನಮ್ಮ ಆಶಯವಾಗಿದೆ, ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ನಗರದ ತಮ್ಮ ಗೃಹ ಕಚೇರಿಯಲ್ಲಿ, ರೇಷ್ಮೆ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ರೇಷ್ಮೆ ಬೆಳೆಗಾರರಿಗೆ ಸಲಕರಣೆ ವಿತರಿಸಿ ಮಾತನಾಡಿದ ಅವರು ರೈತರಿಗೆ ರೇಷ್ಮೆ ಕೃಷಿಗೆ ಸಂಬಂಧಿಸಿದ ವಿವಿಧ ಯಾಂತ್ರೀಕೃತ ಸಲಕರಣೆಗಳನ್ನು ವಿತರಿಸಿ ರೈತರು ಹಳೆಯ ಪದ್ಧತಿಯ ಜೊತೆಗೆ ಆಧುನಿಕ ಯಾಂತ್ರೀಕೃತ ಸಲಕರಣೆಗಳನ್ನು ಅಳವಡಿಸಿಕೊಳ್ಳಬೇಕು.
ತಂತ್ರಜ್ಞಾನದ ಬಳಕೆಯಿಂದ ರೇಷ್ಮೆಯ ಗುಣಮಟ್ಟ ಹೆಚ್ಚುವುದಲ್ಲದೆ, ಕಡಿಮೆ ಶ್ರಮದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಉತ್ತಮ ಗುಣಮಟ್ಟದ ರೇಷ್ಮೆ ಉತ್ಪಾದನೆಯ ಮೂಲಕ ರೈತರು ಹೆಚ್ಚಿನ ಲಾಭ ಗಳಿಸಿ, ಆರ್ಥಿಕವಾಗಿ ಮತ್ತಷ್ಟು ಸಬಲರಾಗಬೇಕು, ಎಂದು ಕರೆ ನೀಡಿದರು.ಈ ಕಾರ್ಯಕ್ರಮದಲ್ಲಿ ಚಂದ್ರು ಶ್ಯಾಮರಾಯನವರ, ಹನಮಂತ ಸಿಂಗನ್ನವರ, ಗೀರೀಶ್ ಮುನವಳ್ಳಿ, ಸುರೇಶ್ ತುಪ್ಪದ, ಸಂತೋಷ ನೊರೆವರ, ಮೈಲಾರ್ಪ ಹೊಸಮನಿ, ಪ್ರವೀಣ್ ರಾಮಪ್ಪನವರ, ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು, ಹಾಗೂ ತಾಲೂಕಿನ ಗ್ರಾಮಗಳಿಂದ ಆಗಮಿಸಿದ್ದ ರೇಷ್ಮೆ ಬೆಳೆಗಾರರು ಭಾಗವಹಿಸಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 