ಬಳ್ಳಾರಿ

ಶಾಲೆ ಮಕ್ಕಳಿಗೆ ಉಚಿತವಾಗಿ ನೋಟು ಪುಸ್ತಕಗಳ ವಿತರಣೆ

ಶಾಲೆ ಮಕ್ಕಳಿಗೆ ಉಚಿತವಾಗಿ ನೋಟು ಪುಸ್ತಕಗಳ ವಿತರಣೆ

ಲೋಕದರ್ಶನ ವರದಿ 

ಬಳ್ಳಾರಿ 19: ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವದ ಅಂಗವಾಗಿ ಕರ್ನಾಟಕ ಮರಾಠ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಸೇನೆ ಬಳ್ಳಾರಿ ಇವರ ವತಿಯಿಂದ ತಾಲ್ಲೂಕಿನ ಸಂಗನಕಲ್‌ನ ಅಂಬೇಡ್ಕರ್ ಕಾಲೋನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ನೋಟು ಪುಸ್ತಕಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಯುವ ಅಧ್ಯಕ್ಷ ವಿನೋದ್ ಎಂ. ಚವ್ಹಾಣ್ ಅವರು ಶಿವಾಜಿ ಮಹಾರಾಜರ ಸಾಹಸಗಾಥೆ, ದೇಶಪ್ರೇಮ ಮತ್ತು ಆದರ್ಶಗಳು ಮಕ್ಕಳಿಗೆ ಪ್ರೇರಕವಾಗಲಿ ಎಂದು ಅಭಿಪ್ರಾಯ ಹಂಚಿಕೊಂಡರು. ನಂತರ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ  ಆರ್‌.ಎಲ್ ಜಾಧವ್ (ಜಿಲ್ಲಾ ಗೌರವಾಧ್ಯಕ್ಷರು) ಶಂಕರರಾವ್ ಗಾಯಕ್ವಾಡ್ (ಜಿಲ್ಲಾ ಉಪಾಧ್ಯಕ್ಷರು) ಮತ್ತು ಶಾಲೆಯ ವಿಜಯಕುಮಾರ್ ಮತ್ತಿತರ ಸಿಬ್ಬಂದಿಯವರು ಉಪಸ್ಥಿತರಿದ್ದರು. 


ಸುದ್ದಿ ಓದಿ