ಶಿಗ್ಗಾವ್

ಪೌಷ್ಠಿಕ ಆಹಾರ ಡಬ್ಬ ವಿತರಣೆ

ಪೌಷ್ಠಿಕ ಆಹಾರ ಡಬ್ಬ ವಿತರಣೆ

ಶಿಗ್ಗಾವಿ 20: ದಿವಂಗತ ಚನ್ನಬಸಪ್ಪ ಬಸವಣೆಪ್ಪ ಯಲಿಗಾರ ಪ್ರಥಮ ವರ್ಷದ ಸ್ಮರಣೋತ್ಸವದ ಅಂಗವಾಗಿ ಸಿ.ಬಿ.ಯಲಿಗಾರ ಸೇವಾ ಸಂಸ್ಥೆ ಗಂಗೇಬಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ, ಜಿಲ್ಲಾ ಆಸ್ಪತ್ರೆ ಹಾವೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಹಾವೇರಿ, ತಾಲೂಕ ಆಸ್ಪತ್ರೆ ಶಿಗ್ಗಾವಿ, ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಶಿಗ್ಗಾವಿ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯ ನಿಮಿತ್ಯ 1000 ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಡಬ್ಬ ವಿತರಣೆ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು ದಿ.22ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರೀಯುತ ಶಶೀಧರ ಯಲಿಗಾರ ಹೋಂ ಸ್ಟೇ ಗಂಗೇಬಾವಿಯಲ್ಲಿ ನೇರವೇರಿಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಎಸ್.ರಾಘವೇಂದ್ರಸ್ವಾಮಿ, ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಡಬ್ಬ ವಿತರಣೆ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು ಸಿ.ಬಿ.ಯಲಿಗಾರ ಸಂಸ್ಥೆ ಅಧ್ಯಕ್ಷ ಶಶೀಧರ ಯಲಿಗಾರ, ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್.ಹಾವನೂರ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸುರೇಶ ಪೂಜಾರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನಿಲೇಶ ಎಂ.ಎನ್, ತಾಲೂಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹನುಮಂತಪ್ಪ ಪಿ.ಹೆಚ್, ತಾಲೂಕ ಆರೋಗ್ಯಾಧಿಕಾರಿ ಡಾ.ಹನುಮಂತಪ್ಪ ಕುಡಚಿ, ರೈತದ್ವನಿ ಸಂಪಾದಕ ಬಸವರಾಜ ಕುರಗೋಡಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಕ್ಷಯರೋಗಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆಗೆ ಶಶೀಧರ ಯಲಿಗಾರ ಕೋರಿದ್ದಾರೆ.

ಸುದ್ದಿ ಓದಿ