ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ
ಶೇಡಬಾಳ 27: ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಅಡಿಯಲ್ಲಿ ಸನ್ 2022-23 ನೇ ಸಾಲಿನ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಕಾಗವಾಡ ಪಟ್ಟಣದ ಸರ್ಕಾರಿ ಶಾಲೆಯ 1 ರಿಂದ 8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಯನ್ನು ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಬುಧವಾರ ದಿ. 27 ರಂದು ಮೊಟ್ಟೆ, ಬಾಳೆಹಣ್ಣು ಮತ್ತು ಚುಕ್ಕಿಯನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಮಯದಲ್ಲಿ ಶಾಸಕರು ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಿಕ್ಕ ಮಕ್ಕಳಲ್ಲಿ ಅಪೌಷ್ಟಿಕಾಂಶ ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಹಾಗೂ ಪೋಷ್ಠಿಕಾಂಶ ವೃದ್ಧಿಸು ಗೋಸ್ಕರ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿಯಲ್ಲಿ ಸನ್ 2022- 23 ನೇ ಸಾಲಿಗೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಎರಡು ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಯನ್ನು ವಿತರಿಸಲಾಗುವುದು. ಇವತ್ತು ನಾವು ಕಾಗವಾಡ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿತರಿಸಿದ್ದು, ಅದೇ ರೀತಿ ನಮ್ಮ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿಯ ಪ್ರತಿಯೊಂದು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಿಸಲಾಗುವುದು. ಶಿಕ್ಷಕರು ಮಕ್ಕಳಿಗೆ ವ್ಯವಸ್ಥಿತವಾಗಿ ಉತ್ತಮ ಗುಣಮಟ್ಟದ ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ವಿತರಿಸಲು ಸೂಚನೆ ನೀಡಿದರು.
ಕಾಗವಾಡ ತಹಶೀಲ್ದಾರ್ ರಾಜೇಶ್ ಬುರ್ಲಿ, ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಪ್ಪಾ ಮುಂಜೆ, ಕಾಗವಾಡ ತಾಲೂಕ ವೈದ್ಯಾಧಿಕಾರಿ ಡಾ. ಪುಷ್ಪಲತಾ ಸುಣ್ಣದಕಲ, ಮುಖಂಡರಾದ ಕೆ.ಟಿ. ಕಾಂಬಳೆ, ರವೀಂದ್ರ ಖಡಾಖಡಿ, ಎಸ್.ಬಿ. ಪಾಟೀಲ, ದಾದಾ ಪಾಟೀಲ, ರಾಜೇಂದ್ರ ಪೋತದಾರ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ ಕಾರ್ಯಕರ್ತರು, ಶಾಲೆಯ ಮುದ್ದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.