ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ವಿತರಣೆ
Distribution of school uniforms to students
ಲಕ್ಷ್ಮೇಶ್ವರ 14: ತಾಲ್ಲೂಕಿನ ಶಿಗ್ಲಿ ಗ್ರಾಮದ ಗ್ರಾಮಭಾರತಿ ಶಿಕ್ಷಣ ಸಮಿತಿಯ ಜಾನಕಿಬಾಯಿ ರಜಪೂತ ಕನ್ನಡ ಪ್ರಾಥಮಿಕ ಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕೂಲ್ ಯೂನಿಫಾರ್ಮ್‌ಗಳನ್ನು ವಿತರಿಸಲಾಯಿತು.
ಪಾಪನಾಶಿ ಜ್ಞಾನ ಗಂಗೋತ್ರಿ ಇಂಟರ್‌ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷರಾದ ಐ.ಎಸ್. ಪೂಜಾರ ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಆಸಕ್ತಿ ತೋರಿದರೆ ಗುರಿ ಸಾಧಿಸಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ಎಸ್.ಪಿ. ಬಣಿಗಾರ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಪೋಷಕರು ತಮ್ಮ ಮಕ್ಕಳ ಮೇಲೆ ಅಪಾರ ನೀರೀಕ್ಷೆ ಇಟ್ಟುಕೊಂಡಿರುತ್ತಾರೆ. ಅವರ ಆಶಯಗಳನ್ನು ಈಡೇರಿಸುವ ಮೂಲಕ ತಮಗೆ ಶಿಕ್ಷಣ ನೀಡಿದ ಶಾಲೆ ಹಾಗೂ ಗುರುಗಳ ಹೆಸರನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದಣ್ಣ ಎಲಿಗಾರ, ಸೋಮಣ್ಣ ದಾಣಗಲ್ಲ, ಫಕೀರೇಶಪ್ಪ ಹುಣಗುಂದ, ಸಿ.ಎಂ. ರಾಗಿ, ಹನಮಂತಪ್ಪ ತಳವಾರ, ಡಿ.ವೈ. ಹುಣಗುಂದ, ಭರತ ಬಣಿಗಾರ, ಚಂದ್ರಣ್ಣ ತೋಟದ, ವೀರಣ್ಣ ಪವಾಡದ, ಜಿ.ಎಫ್. ಘಂಟಾಮಠ, ಪುಂಡಲೀಕ ಲಮಾಣಿ, ಶಿವಣ್ಣ ಲಮಾಣಿ, ತಾವರ್ಪ ಲಮಾಣಿ ಸೇರಿದಂತೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಲಾ ಡ್ರೆಸ್ ವಿತರಿಸಿದ ಐ.ಎಸ್. ಪೂಜಾರ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿಯವರು ಅವರ ಸಾಮಾಜಿಕ ಕಾಳಜಿ ಮತ್ತು ಶೈಕ್ಷಣಿಕ ಸೇವೆಗೆ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 