ಜನಗಣತಿ ಕಾರ್ಯ ಯಶಸ್ವಿಗೆ ಕೈಜೋಡಿಸಲು ಜಿಲ್ಲಾಧಿಕಾರಿಗಳ ಸೂಚನೆ
District Collector's instructions to join hands for the success of the census work
ವಿಜಯಪುರ 02: ಜಿಲ್ಲೆಯಾದ್ಯಂತ ಏಪ್ರಿಲ್.1ರಿಂದ ರಾಷ್ಟ್ರೀಯ ಜನಗಣತಿಯ ಮೊದಲ ಹಂತದ ಸ್ವಯಂ ಜನಗಣತಿ ಕಾರ್ಯಾರಂಭವಾಗಿದ್ದು, ಏ. 15 ರೊಳಗಾಗಿ ಸಾರ್ವಜನಿಕರು, ಎಲ್ಲ ಇಲಾಖೆಗಳ ಅಧಿಕಾರಿ,ಸಿಬ್ಬಂದಿ ಸ್ವಯಂ ಗಣತಿಗೊಳಪಡಿಸುವ ಮೂಲಕ ಜನಗಣತಿ ಕಾರ್ಯ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಳಿಗೆ ಮನವಿ ಮಾಡಿದರು.
ರಾಷ್ಟ್ರೀಯ ಜನಗಣತಿ 2027 ರ ಮೊದಲ ಹಂತದ ಸ್ವಯಂ ಗಣತಿ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿ ಇಲಾಖೆಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿಯ ಸ್ವಯಂ ಗಣತಿ ಪೂರ್ಣಗೊಳಿಸಿ ಎನ್ಯೂಮರೇಶನ್ ಮಾಡಿಸಬೇಕು. ತಮ್ಮ ಕಚೇರಿಗಳಲ್ಲಿ ಎಷ್ಟು ಜನರದ್ದು ಆಗಿದೆ ಎಂಬ ವರದಿಯನ್ನು ಜಿಲ್ಲಾಡಾಳಿತಕ್ಕೆ ತಕ್ಷಣ ಸಲ್ಲಿಸುವ ಮೂಲಕ ಜನಗಣತಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಜನಗಣತಿಯಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸುವುದು ಕಡ್ಡಾಯವಾಗಿದೆ. ಪ್ರತಿ ತಾಲೂಕಿನಿಂದ ಯಾರೂ ಜನಗಣತಿಯಿಂದ ಹೊರಗುಳಿಯದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು. ಸ್ವಯಂ ಗಣತಿ ಕಠಿಣವಾಗಿಲ್ಲ. ಅದು ಸರಳವಾಗಿದೆ. ನಾನು ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡಿದ್ದೇನೆ. ಹಾಗಾಗಿ ಎಲ್ಲ ಸಾರ್ವಜನಿಕರು,ಅಧಿಕಾರಿ, ಸಿಬ್ಬಂದಿ ಸ್ವಯಂ ಗಣತಿ ಆನಲೈನ್ ಮೂಲಕ ಮಾಡುವಂತೆ ಅವರು ಸೂಚಿಸಿದರು.
ಸ್ವಯಂ ಗಣತಿ ಮಾಡಿದ ನಂತರ ಗಣತಿ ಅಧಿಕಾರಿಗಳು ಮನೆಗ ಬಂದಾಗ ಸೆಲ್ಫ್ ಎಮ್ಯುರೇಶನ್ ಗಣತಿದಾರರಿಗೆ ಹಸ್ತಾಂತರಿಸಬೇಕು ಎಂದರು. ಇನ್ನೊಂದೆಡೆ ಅತೀ ದೊಡ್ಡ ಇಲಾಖೆಯ ಖ್ಯಾತಿಯ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜನಗಣತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಅವರು, ಶಿಕ್ಷಣ ಇಲಾಖೆಯಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಬಿಟ್ಟು ಹೋಗದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಸ್ವಸಹಾಯ ಗುಂಪಿನವರು, ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಯಡಿ ಕೆಲಸಮಾಡುವ ಪೌರ ಕಾರ್ಮಿಕರು ಜನಗಣತಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಮೂಲಕ ಅವರನ್ನೆಲ್ಲ ಸ್ವಯಂ ಗಣತಿಗೆ ಒಳಪಡಿಸಬೇಕು ಎಂದು ಆಯಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪ್ರತ್ಯೇಕ ಸಭೆಗೆ ಸೂಚನೆ: ಈ ವಿಷಯಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ವಯಂ ಗಣತಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯ ಪ್ರತಿ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಸ್ವಯಂ ಗಣತಿ ಮಾಡಿಸಿಕೊಳ್ಳಲು ಸೂಚಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಇದಕ್ಕೆ ಸಮಯ ಬಹಳೇನಿಲ್ಲ. ಕೇವಲ 15 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಿಬ್ಬಂದಿಗೆ ತರಬೇತುಗೊಳಿಸಲಾಗಿದೆ. ಆ ತರಬೇತಿದಾರರಿಗೆ ಶೀಘ್ರದಲ್ಲಿ ಗುರುತಿನ ಚೀಟಿ ನೀಡಲಾಗುವುದು ಎಂದ ಅವರು, 600 ರಿಂದ 800 ಜನರಿಗೆ ಸಾಕಾಗುವಷ್ಟು ಸಿಬ್ಬಂದಿ ನಿಯೋಜಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿಗಳಾದ ಡಾ.ಓದ್ರಾಮ, ಇಂಡಿ, ವಿಜಯಪುರ ಉಪವಿಭಾಗಾಧಿಕಾರಿಗಳು, ಎಲ್ಲ ತಾಲೂಕಿನ ತಹಸೀಲ್ದಾರರು, ಡಿಡಿಪಿ, ಬಿಇಒ ಸೇರದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 