ಗದಗ

ಕನ್ನಡ ರಾಜ್ಯೋತ್ಸವ ವ್ಯವಸ್ಥಿತವಾಗಿ ಆಚರಿಸಲು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ಕರೆ

ಕನ್ನಡ ರಾಜ್ಯೋತ್ಸವ ವ್ಯವಸ್ಥಿತವಾಗಿ ಆಚರಿಸಲು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ಕರೆ

ಲೋಕದರ್ಶನ ವರದಿ  

          ಗದಗ   29 : ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು    ವ್ಯವಸ್ಥಿತವಾಗಿ ಹಾಗೂ  ಸಂಭ್ರಮದಿಂದ  ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ತಿಳಿಸಿದರು.   ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

             ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು  ಸೂಚಿಸಿದರು. ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಆದ್ಯತೆ ವಹಿಸಬೇಕು. ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ, ವೇದಿಕೆ ಅಲಂಕಾರ, ಸನ್ಮಾನ ವ್ಯವಸ್ಥೆ ಕುರಿತಂತೆ ಯಾವುದೇ ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.    

              ಅಂದು ಬೆಳಿಗ್ಗೆ 7.30 ಗಂಟೆಗೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜ ಆವರಣದಿಂದ ಕಲಾತಂಡಗಳ ಜೊತೆಗೆ  ತಾಯಿ ಭುವನೇಶ್ವರಿಯ ಮೆರವಣಿಗೆಯು ಜಿಲ್ಲಾ  ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.9 ಗಂಟೆಗೆ ನಗರದ ಕೆ.ಎಚ್‌.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.   

                ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾ ದಳಗಳಿಂದ  ಪರೇಡ್,  ಪಥ ಸಂಚಲನ ಜರುಗಲಿವೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ದಚಿತ್ರಗಳ ಪ್ರದರ್ಶನ ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘಸಂಸ್ಥೆಯವರು.

                  ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಅಂಬುಲನ್ಸ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು.  ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದರು. 


ಸುದ್ದಿ ಓದಿ