ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ
District Collector Nagendra Prasad K at the District Task Force meeting
ಬಳ್ಳಾರಿ 05: ಜಿಲ್ಲೆಯಲ್ಲಿ ಮಾ.11 ರಿಂದ 14 ವರ್ಷದ ಹೆಣ್ಣುಮಕ್ಕಳಿಗೆ ಎಚ್ಪಿವಿ ಲಸಿಕೆ (ಗರ್ಭಕಂಠದ ಕ್ಯಾನ್ಸರ್ ತಡೆಯಲು) ನೀಡುವ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಎಚ್ಪಿವಿ ಲಸಿಕಾ ಅಭಿಯಾನ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಹಾಲ್ ಸಭಾಂಗಣದಲ್ಲಿ ಗುರುವಾರ ಏರಿ್ಡಸಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಸಹಕಾರಿಯಾದ ‘ಹ್ಯೂಮನ್ ಪ್ಯಾಪಿಲೋಮ ವೈರಸ್ ಲಸಿಕೆ’ಯನ್ನು (ಎಚ್ಪಿವಿ) 14 ವರ್ಷದ ಹೆಣ್ಣು ಮಕ್ಕಳಿಗೆ ವಿತರಿಸುವ ಅಭಿಯಾನ ಇದಾಗಿದ್ದು, ಜಿಲ್ಲೆಯಲ್ಲಿ 14 ವರ್ಷದ ಸುಮಾರು 20 ಸಾವಿರ ಬಾಲಕಿಯರಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಮನೆ ಭೇಟಿ ನೀಡಿ ಈ ಲಸಿಕೆಯನ್ನು ಹಾಕಲಾಗುತ್ತದೆ.
ಈ ಅಭಿಯಾನವು ಮೂರು ತಿಂಗಳು ನಡೆಯಲಿದ್ದು, 14 ವರ್ಷದ ಎಲ್ಲ ಬಾಲಕಿಯರು ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ಸಹಕಾರಿಯಾಗಿದ್ದು, ಈ ಕುರಿತು ಸಮುದಾಯಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಮುಖ್ಯವಾಗಿ ಲಸಿಕೆ ಬಗ್ಗೆ ತಪ್ಪು ಕಲ್ಪನೆಯನ್ನು ಹೋಗಲಾಡಿಸಿ ಅವರಿಗೆ ಮನದಟ್ಟು ಮಾಡಬೇಕು ಎಂದು ಹೇಳಿದರು. ಪೋಷಕರ ಒಪ್ಪಿಗೆಯ ಮೇರೆಗೆ ಲಸಿಕೆ ನೀಡಬಹುದಾಗಿದ್ದು, ಒತ್ತಾಯ ಮಾಡುವಂತಿಲ್ಲ. ಅದರಲ್ಲೂ 14 ವರ್ಷ ಮೇಲ್ಪಟ್ಟ ಬಾಲಕಿಯರಿಗೂ ನೀಡುವಂತಿಲ್ಲ. ಹಾಗಾಗಿ ಲಸಿಕೆ ಪಡೆಯಲು ನೋಂದಣಿಯು ಕಡ್ಡಾಯವಾಗಿರುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳು ಒಳಪಡಿಸಬೇಕು ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಬೇಕು ಎಂದರಲ್ಲದೇ, ಖಾಸಗಿ ಶಾಲೆಗಳಲ್ಲಿ ಪೋಷಕರ ಸಭೆ ನಡೆಸುವ ಮೂಲಕ ಲಸಿಕೆ ಕುರಿತು ಮಾಹಿತಿ ನೀಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಎಚ್ ಪಿವಿ ಲಸಿಕೆ ಶೇ.99 ರಷ್ಟು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದ್ದು, ಜಿಲ್ಲೆಯಲ್ಲಿ 5 ಸಾವಿರ ಡೋಸ್ ಲಭ್ಯವಿದೆ. ಈ ಲಸಿಕೆ ಹೊರಗಡೆ ಪಡೆಯಲು 10 ಸಾವಿರ ರೂ. ಪಾವತಿ ದರವಿದೆ ಎಂದು ಸಭೆಗೆ ತಿಳಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರಿತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ.ಆರ್. ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 