ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ನಕುಲ್ ಕರೆ
ಬಳ್ಳಾರಿ,ಸೆ.1: ಬಳ್ಳಾರಿ ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ - 2020 ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಡಿಸಿ ನಕುಲ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮವು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದ್ದು, ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರ್ಪಡೆ, ತೆಗೆದು ಹಾಕುವಿಕೆ, ಪರಿಶೀಲನೆ ಮತ್ತು ದೃಢೀಕರಣ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.
ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಚುನಾವಣಾ ಆಯೋಗದ ನೂತನ ಆಂಡ್ರಾಯ್ಡ್ ಅಪ್ಲಿಕೇಷನ್ ವೋಟರ್ ಹೆಲ್ಪ್ಲೈನ್ನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ ಧೃಡೀಕರಿಸಿಕೊಳ್ಳಬಹುದಾಗಿರುತ್ತದೆ ಮತ್ತು www.nvsp .in ವೆಬ್ಸೈಟ್ನಲ್ಲೂ ಕೂಡ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದಲ್ಲಿ "ಮತದಾರರ ಸಹಾಯವಾಣಿ - 1950" ಟೋಲ್ ಫ್ರೀ ಸಂಖ್ಯೆಗೆ ಕರೆಮಾಡಿ ಸಂಪರ್ಕಿಸಬಹುದಾಗಿರುತ್ತದೆ ಅಥವಾ ಸ್ಥಳೀಯ ಮಹಾನಗರ ಪಾಲಿಕೆ ಆಯುಕ್ತರ ಕಛೇರಿ, ಸಹಾಯಕ ಆಯುಕ್ತರ ಕಛೇರಿ, ತಹಶೀಲ್ದಾರರ ಕಛೇರಿಗಳಿಗೆ ಭೇಟಿ ನೀಡಬಹುದಾಗಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಸಹಾಯಕ ಆಯುಕ್ತರಾದ ರಮೇಶಕೋನರೆಡ್ಡಿ, ತಹಸೀಲ್ದಾರ್ ನಾಗರಾಜ ಮತ್ತಿತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 