ಸಂವಿಧಾನ ಜಾಥಕ್ಕೆ ಜಿಲ್ಲಾಧಿಕಾರಿ ಚಾಲನೆ
District Collector drives for Constitution Jatha
ಕಾರವಾರ, ನ.26 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾದ ಸಂವಿಧಾನ ಚಾಥಾಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಸ್ವೀಕರಿಸಲಾಯಿತು. ಜಾಥಾವು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ವಿವಿಧ ಕಲಾ ತಂಡದೊಂದಿಗೆ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಕ್ತಾಯಗೊಂಡಿತು.
ಈ ಸಂದಢರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಲೀಪ್ ಎಂ.ಎನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲೀಶ್ ಶಶಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶಿವಕ್ಕ ಮಾದರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಕೆ. ಉಮೇಶ್, ನಗರಸಭೆ ಪೌರಯುಕ್ತ ಜಗದೀಶ್ ಹುಲಗಜ್ಜಿ, ರವಿರಾಜ ಅಂಕೋಲೆಕರ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 