ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ
ಹಾವೇರಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪತ್ತೆಮಾಡಿ ಒಂದು ವಾರದೊಳಗಾಗಿ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಟಾಸ್ಕ್ ಫೋಸರ್್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬುಧವಾರದಿಂದಲೇ ಜಿಲ್ಲೆಯಲ್ಲಿ ಸ್ಥಾಪಿತವಾಗಿರುವ ಮರಳು ತಪಾಸಣಾ ಕೇಂದ್ರಗಳನ್ನು ಕ್ರೀಯಾಶೀಲಗೊಳಿಸಬೇಕು. ಕಡ್ಡಾಯವಾಗಿ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ತಪಾಸಣಾ ಕೇಂದ್ರದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ಹಾವೇರಿ ಹಾಗೂ ರಾಣೇಬೆನ್ನೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತಂತೆ ವ್ಯಾಪಕ ದೂರುಗಳು ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆಗೆ ಸೂಚಿಸಿದರು.
ಕಂಚಾರಗಟ್ಟಿ ಹಾಗೂ ಹರಳಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಹನಗಳು ಬೋಟ್ಗಳು ಕಂಡು ಬಂದಿವೆ. ಈ ವಾಹನಗಳಿಗೆ ಪರವಾನಿಗೆ ಪಡೆದಿವೆಯೇ ಹಾಗೂ ಯಾವ ಉದ್ದೇಶಕ್ಕೆ ಪರವಾನಿಗೆ ಪಡೆಯಲಾಗಿದೆ ಎಂಬುದನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಬೇಕು. ಕೃಷಿ ಇತರ ಉದ್ದೇಶಗಳಿಗಾಗಿ ಪರವಾನಿಗೆ ಪಡೆದು ಮರಳು ಸಾಗಾಣಿಕೆ, ಗಣಿಗಾರಿಕೆಗೆ ಅಕ್ರಮವಾಗಿ ಬಳಸಿಕೊಂಡರೆ ಅಂತಹ ವಾಹನ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕಳ್ಳಮಾರ್ಗದಲ್ಲಿ ಪರವಾನಿಗೆ ಇಲ್ಲದೆ ನದಿ ಪಾತ್ರದಲ್ಲಿ ಸಣ್ಣ ಸಣ್ಣ ರಸ್ತೆಗಳನ್ನು ಮಾಡಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿವೆ ಎಂಬ ದೂರುಗಳು ಬಂದಿವೆ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಪರವಾನಿಗೆ ಇಲ್ಲದೆ, ವಾಹನಕ್ಕೆ ನಂಬರ್ ಇಲ್ಲದೆ ಹಾಗೂ ಸಾಮಥ್ರ್ಯಕ್ಕಿತ ಹೆಚ್ಚಿಗೆ ಮರಳು ಸಾಗಿಸುವ ವಾಹನಗಳನ್ನು ತಕ್ಷಣ ಜಪ್ತಿಮಾಡಿ ಅಗತ್ಯ ಕ್ರಮಕೈಗೊಳ್ಳಿ ಎಂದು ಪೊಲೀಸ್, ಪ್ರಾದೇಶಿಕ ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ಗಳಿವೆ ಎಂದು ಜಿಲ್ಲಾಧಿಕಾರಿಗಳು ಪ್ರಶ್ನಿಸಿದ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಲತಾ ಕವಲಿ ಅವರು ಮಾತನಾಡಿ, ಕಂಚಾಗಟ್ಟಿ, ಶಿಬಾರ, ಗುತ್ತಲ ಹಾಗೂ ಕೊರಡೂರ ಸೇರಿ ನಾಲ್ಕು ಚೆಕ್ ಪೋಸ್ಟ್ಗಳಿದ್ದು, ಸದ್ಯ ಗುತ್ತಲ ಚೆಕ್ ಪೋಸ್ಟ್ ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರು ಮಾತನಾಡಿ, ಗುತ್ತಲ ಭಾಗದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರತಿ ಮನೆಮುಂದೆ ಜೆ.ಸಿ.ಬಿ., ಟ್ರ್ಯಾಕ್ಟರ್, ತೆಪ್ಪಗಳು ನಿಂತಿವೆ.
ಇವು ಯಾರಿಗೆ ಸೇರಿದದ್ದು ಗ್ರಾಮಸ್ಥರನ್ನು ಕೇಳಿದರೆ ನಂದಲ್ಲ ಎಂದು ಹೇಳುತ್ತಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಮಾತನಾಡಿ ಅಕ್ರಮ ಮರಳು ಸಾಗಾಣಿಕೆ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಹಾಗೂ ಅನುಮತಿ ಇಲ್ಲದೆ ಸಾಗಾಣಿಕೆ ಮಾಡುತ್ತಿರುವ ಮತ್ತು ನೋಂದಣಿ ಸಂಖ್ಯೆ ಇಲ್ಲದ ವಾಹನಗಳನ್ನು ವಶಕ್ಕೆ ತಗೆದುಕೊಳ್ಳಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆಗೆ ತಡೆಗೆ ಪೊಲೀಸ್ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಸವಣೂರು ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಶಂಕರ, ರಾಣೇಬೆನ್ನೂರು ಹಾಗೂ ಹಾವೇರಿ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 