ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
District Collector orders to impose a 200 m. radius prohibitory order around examination centers
ಬಳ್ಳಾರಿ 17: ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಮಾ.18 ರಿಂದ 21 ರ ವರೆಗೆ ಲೋಕೋಪಯೋಗಿ ಇಲಾಖೆಯ ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್-ಎ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 