ಬೈಲಹೊಂಗಲ

ಕೋವಿಡ್ ಸೋಂಕಿತರ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಸೋಂಕಿತರ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಲೋಕದರ್ಶನ ವರದಿ

ಬೈಲಹೊಂಗಲ 19: ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಪಟ್ಟಣದಲ್ಲಿ ಎಸ್ಜಿವಿ ಆಯುವರ್ೇದಿಕ ಮಹಾವಿದ್ಯಾಲಯದಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಅದೇ ರೀತಿ ಪ್ರತಿ ತಾಲ್ಲೂಕಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಹೊಂದಿರುವ 50 ಬೆಡ್ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

     ಅವರು ಶನಿವಾರ ಎಸ್ಜಿವಿ ಆಯುವರ್ೆದಿಕ ಮಹಾವಿದ್ಯಾಲಯದಲ್ಲಿ ಲಕ್ಷಣರಹಿತ ಕೋವಿಡ್ ಸೋಂಕಿತರ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿ, ಲಕ್ಷಣ ರಹಿತರಿಗೆ ಇಲ್ಲಿ ಚಿಕಿತ್ಸೆ ನೀಡಿರಿ.  ತಾಲ್ಲೂಕು ಮಟ್ಟದಲ್ಲಿ ಹತ್ತು ದಿನಗಳ ಕಾಲ ಸಕರ್ಾರದ ಮಾರ್ಗಸೂಚಿ ಪ್ರಕಾರ ಊಟೋಪಹಾರ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, ಮಾನಸಿಕವಾಗಿ ಸದೃಡವಾಗಿ ಇರುವಂತೆ ದೈರ್ಯ ತುಂಬಿರಿ. ಇಲ್ಲಿ ಒಳ್ಳೆಯ ವಾತಾವರಣವಿರುವದರಿಂದ ಕರೋನಾ ಸೊಂಕಿತರು ಹೆದರುವ ಅವಶ್ಯಕತೆ ಇಲ್ಲ ಎಂದರು.

   ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ ಡಾ.ದೊಡ್ಡಪ್ಪ ಹೂಗಾರ, ತಾಲೂಕಾ ಆರೋಗ್ಯಧಿಕಾರಿ ಡಾ.ಎಸ್.ಎಸ್.ಸಿದ್ದನ್ನವರ, ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಓದಿ