ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ
ಗದಗ 23: ದಿನಾಂಕ 15-09-2026 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಗುರುವಾರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮಗಳ ಆಯೋಜನೆ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಬಂದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಭವನದ ಅಡಿಟೋರಿಯಮ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಯಿತು.
. ಅಂದಾಜು ಒಟ್ಟು 240 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಯುವ ಸಂಸತ್ತು ಕಾರ್ಯಕ್ರಮದ ಓಖಋಓಖಿಇಖಿಋಓ ನಲ್ಲಿ ಭಾಗವಹಿಸಿದ್ದು, ಸದರಿ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿವಿಧ ಇಲಾಖೆಯ ಅಧಿಕಾರಿಗಳು , ವಿವಿಧ ಶಾಲೆ ಕಾಲೇಜು ಪ್ರಾಂಶುಪಾಲರು / ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.