ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
District Magistrate Dr. Anand K. instructs to act with seriousness in mind regarding SCP-TSP Act Ope
ಲೋಕದರ್ಶನ ವರದಿ
ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ವಿಜಯಪುರ 15: ಎಸ್‌ಸಿಪಿ-ಟಿಎಸ್‌ಪಿ ಇದೊಂದು ಕಾಯ್ದೆಯಾಗಿದೆ. ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಸೆಪ್ಟಂಬರ್ 2025ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಸಮರ್ಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್‌ಸಿಪಿ ಟಿಎಸ್‌ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿರುವುದರಿಂದ ಇದಕ್ಕೆ ಆಸ್ಪದ ನೀಡದೇ, ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಸಮರ್ಕವಾಗಿ ಅನುಷ್ಠಾನಗೊಳಿಸಿ ಅರ್ಹರಿಗೆ ಸೌಲಭ್ಯ ದೊರಕಿಸಲು ಅನುದಾನ ವೆಚ್ಚ ಮಾಡುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ, ಪರೀಶೀಲನೆ ನಡೆಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಾಲಕಾಲಕ್ಕೆ, ಅತ್ಯಂತ ಪ್ರಮುಖ ಇಲಾಖೆಗಳಾದ ಶಿಕ್ಷಣ ಇಲಾಖೆ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಪ್ರಗತಿ ಪರೀಶೀಲನೆ ನಡೆಸಬೇಕು. ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳು ಲಾಭ ಫಲಾನುಭವಿಗಳಿಗೆ ತಲುಪುತ್ತಿರುವ ಕುರಿತು ಪರೀಶೀಲನೆ ನಡೆಸಬೇಕ, ಈ ಯೋಜನೆಯಡಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್‌ವಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಯೋಜನೆಯ ವಿವಿಧ ಲೆಕ್ಕಶೀರ್ಷಿಕೆಯಡಿ ಬಿಡುಗಡೆಯಾಗುವ ಅನುದಾನಕ್ಕೆ ನಿಗದಿತ ಕಾಲಾವಧಿಯಲ್ಲಿ ಕ್ರೀಯಾಯೋಜನೆ ಸಿದ್ಧಪಡಿಸಿಕೊಂಡು ಸಂಬಂಧಿಸಿದ ಇಲಾಖಾ ಮುಖ್ಯಸ್ಥರ ಅನುಮೋದನೆ ಪಡೆದುಕೊಂಡು ಫಲಾನುಭವಿಗಳ ಆಯ್ಕೆ ಮಾಡಿ, ಫಲಾನುಭವಿಗಳಿಗೆ ಲಾಭ ದೊರಕಿಸುವ ಮೂಲಕ ಶೇಕಡಾವಾರು ಪ್ರಗತಿ ಸಾಧಿಸುವಂತೆ ಅವರು ಸೂಚನೆ ನೀಡಿದರು.
ಅಧಿಕಾರಿಗಳು ಎಸ್‌ಸಿಪಿ-ಟಿಎಸ್‌ಪಿ ಆರ್ಥಿಕ ಹಾಗೂ ಭೌತಿಕ ಸಾಧನೆಯ ನಿಖರವಾಗಿ ಮಾಹಿತಿ ಸಲ್ಲಿಸಬೇಕು. ಇಲಾಖಾವಾರು ಯೋಜನೆಯ ಮಾಹಿತಿ ಒದಗಿಸಬೇಕು.ಕೇಂದ್ರ, ರಾಜ್ಯ, ಜಿಲ್ಲಾ ಪಂಚಾಯತ್ ಸೇರಿದಂತೆ ಆಯಾ ವಲಯವಾರು ಪ್ರತ್ಯೇಕವಾಗಿ ಮಾಹಿತಿ ಒದಗಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಸೌಲಭ್ಯ ಒದಗಿಸಿರುವ ಕುರಿತು ನಿಖರವಾಗಿ ಮಾಹಿತಿ ಹಾಗೂ ಬಾಕಿ ಉಳಿಯಲು ಇರುವ ಕಾರಣವನ್ನು ನಿಖರವಾಗಿ ಒದಗಿಸಬೇಕು. ಅನುದಾನ ವೆಚ್ಚ ಮಾಡದೆ ಬಾಕಿ ಉಳಿಸಿಕೊಂಡಿರುವ ಕುರಿತು ಸಬೂಬೂ ನೀಡದೆ, ಬಿಡುಗಡೆಯಾದ ಅನುದಾನ, ವೆಚ್ಚ ಮಾಡಿದ ಅನುದಾನಕ್ಕೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಫಲಾನುಭವಿ ಆಯ್ಕೆ, ಸೌಲಭ್ಯ ದೊರಕಿಸುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರೀಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 