ನವಜಾತ ಗಂಡು ಶಿಶುವಿಗೆ ಯತೀನ ಎಂದು ನಾಮಕರಣ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
District Magistrate Mohammad Roshan names newborn baby boy Yateen
ಬೆಳಗಾವಿ ಜೂನ್ 06: ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವಿಶೇಷ ದತ್ತು ಕೇಂದ್ರದಲ್ಲಿ ದಾಖಲಾಗಿರುವ 2 ತಿಂಗಳಿನ ನವಜಾತ ಗಂಡು ಶಿಶುವಿಗೆ ಜೂನ್ 5 ಶುಕ್ರವಾರ ದಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶಾಸ್ತ್ರೋಕ್ತವಾಗಿ “ಯತೀನ್” ಎಂಬ ಹೆಸರಿನ ಮೂಲಕ ನಾಮಕರಣ ಮಾಡಿದರು.
ಜಿಲ್ಲಾಧಿಕಾರಿಗಳು ಮಗುವಿಗೆ ಹೆಸರಿಡುವ ಮೂಲಕ ಮಗುವಿನ ಆರೈಕೆ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿ ಮಗುವಿನ ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಎಂ. ಎನ್. ಚೇತನ ಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀರಾಮಮೂರ್ತಿ ಕೆ.ವಿ. ಸೇರಿದಂತೆ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 