ಜಿಲ್ಲಾ ಯುವ ಸಮಾವೇಶ ತರಬೇತಿ ಕಾರ್ಯಾಗಾರ ಮಲ್ಲಿಕಾರ್ಜುನ ಮಾಳಗಿಮನಿಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
ಗದಗ 18 : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಮಂಗಳೂರು, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು. ಇವರುಗಳ ವತಿಯಿಂದ ಜಿಲ್ಲಾ ಯುವ ಸಮಾವೇಶ ತರಬೇತಿ ಕಾರ್ಯಾಗಾರವನ್ನು ಶನಿವಾರ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಹಾಗೂ ಯುವಕ ಮಂಡಲ ಸವಣೂರು ಇವರುಗಳ ಸಹಕಾರದೊಂದಿಗೆ ರಾಜ್ಯ ಮಟ್ಟದ ಜನಪದ ನೃತ್ಯ ಸ್ಪರ್ಧೆ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭವು ಶನಿವಾರ ದ.ಕ.ಜಿ.ಒಂ.ಉ. ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.ಈ ವೇಳೆ ಮಲ್ಲಿಕಾರ್ಜುನ ಮಾರುತಿ ಮಾಳಗಿಮನಿ, ಉತ್ತರ್ರಭ ಪ್ರಾದೇಶಿಕ ಕನ್ಮಡ ದಿನಪತ್ರಿಕೆ, ಕಾರ್ಯನಿರ್ವಾಹಕ ಸಂಪಾದಕ. ಇವರು ಗದಗ ಜಿಲ್ಲೆಯಿಂದ ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದು ಶನಿವಾರ ಕಲಾವೈಭವ 2025ನೇ ಸಾಲಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇವರಿಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ, ಶಾಸಕಿ ಭಾಗೀರತಿ ಮುರುಳ್ಯಾ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹಾಗೂ ರಾಜ್ಯ ಪ್ರದಾನ ಕಾರ್ಯದರ್ಶಿ ಸುರೇಶ್ ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೂಟ್ಟು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್. ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಶಿವಪ್ರಸಾದ್ ಮೈಲೇರಿ, ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶ್ರಫ್ ಜನತಾ, ಮುಖ್ಯ ಶಿಕ್ಷಕ ನಿಂಗರಾಜು, ಬೆಳಗಾವಿ ಯುವಜನ ಒಕ್ಕೂಟದ ಅಧ್ಯಕ್ಷ ಸಿದ್ದಣ್ಣ ದುರದುಂಡಿ, ಕೊಡಗು ಜಿಲ್ಲಾಧ್ಯಕ್ಷ ಸುಕುಮಾರ್ ಹಾಗೂ ಮುಂತಾದವರಿದ್ದರು.