ಗಣೇಶೋತ್ಸವ ಶಾಂತಿ, ಸೌಹಾರ್ದದಿಂದ ಆಚರಿಸಲು ಜಿಲ್ಲಾಡಳಿತ ಸಜ್ಜು
District administration gears up to celebrate Ganesh Chaturthi with peace and harmony
ಕಾರವಾರ, ಸೆ. 8: ಜಿಲ್ಲೆಯಲ್ಲಿ ಮುಂಬರುವ ಗಣೇಶೋತ್ಸವವನ್ನು ಅತ್ಯಂತ ಶಾಂತಿ, ಸೌಹಾರ್ದತೆ ಹಾಗೂ ಪರಿಸರಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸರ್ವ ರೀತಿಯಲ್ಲಿ ಸಜ್ಜಾಗಿದೆ. ಉತ್ಸವ ಸಮಿತಿಗಳ ಅನುಕೂಲಕ್ಕಾಗಿ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ‘ಏಕಗವಾಕ್ಷಿ ವ್ಯವಸ್ಥೆ’ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಜಿಲ್ಲಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಮೆರವಣಿಗೆ ಹಾಗೂ ಪೆಂಡಾಲ್ಗಳ ಅನುಮತಿಗಾಗಿ ಉತ್ಸವ ಸಮಿತಿಗಳು ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಏಕಗವಾಕ್ಷಿ ಕೌಂಟರ್ ತೆರೆಯಲಾಗಿದೆ.
ಹೆಸ್ಕಾಂ, ಪೊಲೀಸ್, ಲೋಕೋಪಯೋಗಿ ಹಾಗೂ ಸಾರಿಗೆ ಇಲಾಖೆಗಳ ಅನುಮತಿ ಪತ್ರಗಳನ್ನು (ಓಓಅ) ಒಂದೇ ಸ್ಥಳದಲ್ಲಿ ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ವಿವರಿಸಿದರು.
ಉತ್ಸವದ ಸಂದರ್ಭದಲ್ಲಿ ಪಿಒಪಿ ಗಣೇಶ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕಡ್ಡಾಯವಾಗಿ ಪರಿಸರಸ್ನೇಹಿ ಮಣ್ಣಿನ ಮೂರ್ತಿಗಳು ಹಾಗೂ ನೈಸರ್ಗಿಕ ಅಲಂಕಾರಿಕ ವಸ್ತುಗಳನ್ನು ಮಾತ್ರ ಬಳಸಬೇಕು. ಸ್ಥಳೀಯ ಆಡಳಿತ ಗುರುತಿಸಿರುವ ನಿಗದಿತ ಜಲಮೂಲಗಳಲ್ಲಿಯೇ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 