ಬೆಟಗೇರಿ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘ ಪ್ರಶಸ್ತಿ
ಲೋಕದರ್ಶನ ವರದಿ
ಬೆಟಗೇರಿ 21 : ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಜು.20ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಸದಸ್ಯರು, ಪದಾಧಿಕಾರಿಗಳು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮಹಾದೇವ ಕಂಬಿ ಮತ್ತು ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ಹಾಗೂ ಸದಸ್ಯರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಚಾಂಪಿಯನ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.