ಧಾರವಾಡ - ಹುಬ್ಬಳ್ಳಿ

ಜಿಲ್ಲಾ ಬಾಲಭವನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಕಾರ್ಯಕ್ರಮ

ಜಿಲ್ಲಾ ಬಾಲಭವನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಕಾರ್ಯಕ್ರಮ

        ಧಾರವಾಡ ನ.7: ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದ-2026 ರ ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಕಾರ್ಯಕ್ರಮವನ್ನು ನವೆಂಬರ್ 5, 2026 ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.  

           ಸೃಜನಾತ್ಮಕ ಕಲೆ, ಸೃಜನಾತ್ಮಕ  ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆಗಳಾದ (ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ವಾದ್ಯ ಸಂಗೀತ, ಯೋಗನೃತ್ಯ, ಏಕಪಾತ್ರಾಭಿನಯ), ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ, ವಿವಿಧ ಸ್ಪರ್ಧೆಗಳನ್ನು ಏರಿ​‍್ಡಸಲಾಗಿತ್ತು. 

            ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟಕರಾಗಿ ಜಿಲ್ಲಾ ಬಾಲಭವನ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ  ವೀರನಗೌಡ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ, ಮಾತನಾಡಿ, ಜಿಲ್ಲಾ ಬಾಲಭವನವು ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಮಕ್ಕಳು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು.                         ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳು ಉತ್ತಮವಾದ ಪ್ರದರ್ಶನ ನೀಡಿದ್ದು, ಅದರಲ್ಲಿ ಕೆಲವೇ ಮಕ್ಕಳಿಗೆ ತೀರ​‍್ುಗಾರರು ನೀಡಿದ ಅಂಕಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ನೀಡಲಾಗಿದ್ದು, ಉಳಿದ ಮಕ್ಕಳು ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯಾಸ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಯಾವುದೇ ಕಾರಣಕ್ಕೂ ಬೇಸರಗೊಳ್ಳದೆ ಸ್ಪರ್ಧೆಯಲ್ಲಿ ವಿಜೇತರಾಗುವಂತೆ ತಯಾರಿ ಮಾಡಿಕೊಳ್ಳಲು ಸಲಹೆ ನೀಡಿದರು.  

              ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ ಅವರು ಮಾತನಾಡಿ, ಜಿಲ್ಲಾ ಬಾಲಭವನದಿಂದ ಪ್ರತಿ ವರ್ಷ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದು, ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಪ್ರಥಮ, ದ್ವಿತೀಯ, ಸ್ಥಾನಗಳಿಸಿದಂತಹ ಮಕ್ಕಳನ್ನು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆಗಾಗಿ ಕರೆದುಕೊಂಡು ಹೋಗಲಾಗುವುದೆಂದು ಮಕ್ಕಳ ಪೋಷಕರಿಗೆ ತಿಳಿಸಿದರು. 


ಸುದ್ದಿ ಓದಿ