ಗದಗ

ಗದಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ

ಗದಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ


                   ಗದಗ 13 : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಮತ್ತು ನಾವೀನ್ಯತೆಗೆ ವೇದಿಕೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯತ್ ಗದಗ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.                                           

                 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಯಟ್ನ ಹಿರಿಯ ಉಪನ್ಯಾಸಕರಾದ ಬಿ. ಎಫ್‌. ಅರವಟಗಿ ಅವರು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನಾ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರ ಹಾಗೂ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಅಗತ್ಯತೆಯ ಕುರಿತು ಮಾತನಾಡಿದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಸಂಶೋಧನಾ ಪ್ರವೃತ್ತಿ ಹಾಗೂ ನಾವೀನ್ಯತೆಯನ್ನು ಬೆಳೆಸುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದರು.

               ಕಾರ್ಯಕ್ರಮದ ಆರಂಭದಲ್ಲಿ ವಿಜ್ಞಾನ ಶಿಕ್ಷಕರು ಹಾಗೂ ಉಪನಿರ್ದೇಶಕರ ಕಚೇರಿಯ ತಾಂತ್ರಿಕ ಸಹಾಯಕರಾದ ಎಂ. ಎಚ್‌. ಸವದತ್ತಿ ಅವರು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. 1993ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ - ಆಶ್ರಯದಲ್ಲಿ ನಡೆಯುತ್ತಿದ್ದು, 10ರಿಂದ 17 ವರ್ಷದೊಳಗಿನ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಮಹತ್ವದ ವೇದಿಕೆಯಾಗಿದೆ.                  ಸ್ಥಳೀಯ ಸಮಸ್ಯೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಗುರುತಿಸುವುದು, ಪ್ರಯೋಗಗಳ ಮೂಲಕ ಕಲಿಕೆ ), ವೈಜ್ಞಾನಿಕ ಮನೋಭಾವ ಬೆಳೆಸುವುದು, ಎಲ್ಲ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸುವುದು ಹಾಗೂ ಸುಸ್ಥಿರ ಅಭಿವೃದ್ಧಿಯ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶಗಳಾಗಿವೆ ಎಂದು ತಿಳಿಸಿದರು. 


ಸುದ್ದಿ ಓದಿ