ಧಾರವಾಡ - ಹುಬ್ಬಳ್ಳಿ

ಅ.21 ರಂದು ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮ ಆಯೋಜನೆ

ಅ.21 ರಂದು ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮ ಆಯೋಜನೆ

ಧಾರವಾಡ 18: ನಾಗರಿಕರ ಹಲವಾರು ರೀತಿಯ ಸಮಸ್ಯೆಗಳನ್ನು. ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರ ಅಧ್ಯಕ್ಷತೆಯಲ್ಲಿ ಅ.21 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದಕೊರತೆಗಳನ್ನು, ಅಹವಾಲುಗಳನ್ನು ಸಲ್ಲಿಸಬಹುದು. ಈಗಾಗಲೇ ನಡೆದ ಜನ ಸಂಪರ್ಕ ಕಾರ್ಯಕ್ರಮಗಳಲ್ಲಿ ಸ್ವೀಕೃತವಾದ ಬಹುತೇಕ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ. ಇಲಾಖೆಗಳ ಹಾಗೂ ಸರಕಾರದ ಹಂತದಲ್ಲಿ ಬಾಕಿ ಇರುವ ಅರ್ಜಿಗಳನ್ನು ಸಹ ಇತ್ಯರ್ಥಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಹಿಂದೆ ಸಲ್ಲಿಕೆ ಆಗಿರುವ ಅರ್ಜಿಗಳನ್ನು  ಐಪಿಜಿಆರ್‌ಎಸ್ (ಋಉಖಖ) ತಂತ್ರಾಂಶದಲ್ಲಿ ವಿಲೇವಾರಿ ಕ್ರಮ ಜರುಗಿಸಿದ ಮಾಹಿತಿಯೊಂದಿಗೆ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸದರಿ ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. 

ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ