ವಿಜಯಪುರದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ
ಲೋಕದರ್ಶನ ವರದಿ
ವಿಜಯಪುರ 01 : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ವಿಜಯಪುರದ ವಿ.ಭ. ದರಬಾರ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ 2026-27ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕಬಡ್ಡಿ, ಖೋ-ಖೋ, ಹ್ಯಾಂಡ್ಬಾಲ್, ಟೇಬಲ್ ಟೆನಿಸ್, ಟೆನಿಸ್, ವಾಲಿಬಾಲ್, ನೆಟ್ಬಾಲ್ ಹಾಗೂ ಕುಸ್ತಿ ಸ್ಪರ್ಧೆಗಳ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು.
ರೂಪಾ ಆಳಂದಿಕರ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಪ್ರಾಚಾರ್ಯ ಟಿ.ಆರ್. ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗಣ್ಯರನ್ನು ಉಪನ್ಯಾಸಕರ ಮೂಲಕ ಮಾಲಾರೆ್ಣ ಮಾಡಿ ಗೌರವಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ವಿಜಯಪುರ ಉಪನಿರ್ದೇಶಕ ಕೆ.ಎ. ಉಪ್ಪಾರ ಅವರು ವಿದ್ಯಾರ್ಥಿಗಳಿಗೆ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ ಜಿಲ್ಲೆಯ ಹೆಸರನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ಯುವಂತೆ ಸಲಹೆ ನೀಡಿದರು.
ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೆ.ಜಿ. ದೇಶಪಾಂಡೆ, ಡಾ. ಆರಿ್ಜ. ಮಂಗಲಗಿ, ಅಧ್ಯಕ್ಷ ರಾಜೇಶ್ ದರಬಾರ್, ಮಾಜಿ ಶಾಸಕ ಹಾಗೂ ಜಂಟಿ ಕಾರ್ಯದರ್ಶಿ ಸೋಮನಗೌಡ ಪಾಟೀಲ (ಸಾಸನೂರು), ಜಿಲ್ಲಾ ಕ್ರೀಡಾ ಸಂಘಟಕ ಬಿ.ಟಿ. ಗೊಂಗಡಿ ಸೇರಿದಂತೆ ಗಣ್ಯರು, ಅಧಿಕಾರಿಗಳು, ಉಪನ್ಯಾಸಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿದರು. ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ ಗುನ್ನಾಪುರ ಹಾಗೂ ಅಕ್ಷಯಕುಮಾರ ನಾಯಕ ಅವರು ಕ್ರೀಡಾಕೂಟದ ನಿರ್ವಹಣೆಯಲ್ಲಿ ಸಹಕರಿಸಿದರು. ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕ್ರೀಡಾಕೂಟದ ಯಶಸ್ಸಿಗೆ ಸೇವೆ ಸಲ್ಲಿಸಿದರು.