ಅ. 15 ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ
ಧಾರವಾಡ 14: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ಇಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ದಿಕ್ಸೂಚಿ-2024 ವೃತ್ತಿ ಮಾರ್ಗದರ್ಶನ ಮತ್ತು ಐಸಿಟಿ ಕೌಶಲ್ಯ ಕಾರ್ಯಕ್ರಮದ ಉದ್ಘಾಟಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವರು.ನಂತರ ಅವರು ರಾತ್ರಿ 7.30 ಗಂಟೆಗೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ;
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಧಾರವಾಡ 14: ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮ ಪಂಚಾಯತ ಹಾಗೂ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಆಯಾ ತಾಲೂಕಿನ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್ಡಬ್ಲ್ಯೂ) ಇವರಿಗೆ ಅಕ್ಟೋಬರ್ 25, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಗೆ ಅಥವಾ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶ್ತಿಗೆ ಅರ್ಜಿ ಆಹ್ವಾನ
ಧಾರವಾಡ 14: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯಲ್ಲಿ 2024-25 ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಆರ್ಥಿಕತೆ ಮತ್ತು ಪೌಷ್ಠಿಕತೆಗಾಗಿ ತೋಟಗಾರಿಕೆ ಎಂಬ ಧೈಯದೊಂದಿಗೆ ತೋಟಗಾರಿಕೆ ಮೇಳವನ್ನು ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತ, ರೈತ ಮಹಿಳೆಯರಿಗೆ ಸನ್ಮಾನಿಸಲು ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ತೋಟಗಾರಿಕೆ ಮಾಡುತ್ತಿರುವ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಆಥವಾ ಮುಖ್ಯಸ್ಥರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಕುಂಬಾಪುರ ಫಾರ್ಮ, ಧಾರವಾಡದಲ್ಲಿ ಪಡದಯಬಹುದು ಅಥವಾ ವೆಬ್ಸೈಟ್ www.uhsbagalkot.karnataka.gov.in ಮೂಲಕ ಪಡೆದು, ಭರ್ತಿ ಮಾಡಿ, ನವೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 7892770955, 9449872863 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ ಸಂಖ್ಯೆ 1800 425 7910 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ತಿಳಿಸಿದೆ.