ನವೆಂಬರ್ 6 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
District tour of Human Rights Commission members on November 6
ಕೊಪ್ಪಳ 04: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ನ್ಯಾ. ಎಸ್.ಕೆ.ವಂಟಿಗೋಡಿ ಅವರು ನವೆಂಬರ್ 6 ಮತ್ತು 7 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅವರು ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಪ್ರಕರಣ ಸಂಖ್ಯೆ: 3095/10/24/2025(ಎಫ್‌ಬಿ) ಗೆ ಸಂಬಂಧಿಸಿದಂತೆ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ನವೆಂಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 1.30 ಕ್ಕೆ ಗಂಗಾವತಿಗೆ ತೆರಳುವರು. ಗಂಗಾವತಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನದ ಊಟದ ನಂತರ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಸ್ವಯಂ ಪ್ರೇರಿತ ದೂರು ಸಂಖ್ಯೆ: 3950/10/24/2024(ಎಫ್‌ಬಿ) ಗೆ ಸಂಬಂಧಿಸಿದಂತೆ ಗಂಗಾವತಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.
ಅಂದು ಸಂಜೆ 6 ಗಂಟೆಗೆ ಗಂಗಾವತಿಯಿಂದ ನಿರ್ಗಮಿಸಿ 7.30 ಕ್ಕೆ ವಿಜಯನಗರದ ವೈಕುಂಠ ಅತಿಥಿಗೃಹಕ್ಕೆ ತೆರಳಿ ವಾಸ್ತವ್ಯ ಮಾಡುವರು ಎಂದು ಸದಸ್ಯರ ಆಪ್ತ ಸಹಾಯಕ ರೂಪಾ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 