ಕುಷ್ಠರೋಗ ಪ್ರಕರಣ ಪತ್ತೆ ಅಭಿಯಾನ ಯಶಸ್ವಿಗೆ ದಿವ್ಯ ಪ್ರಭು ಕರೆ
ಧಾರವಾಡ 17: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ (ಐಅಆಅ)-2024ದ ಸಮನ್ವಯ ಸಮಿತಿ ಸಭೆಯನ್ನು ದಿ. 16ರಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಮಾಡಲಾಯಿತು.
ಜಿಲ್ಲಾಧಿಕಾರಿಗಳು ಸಭೆಯಲ್ಲಿ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯಾದ್ಯಂತ ದಿ.29ರಿಂದ 14 ನೇ ಅಗಸ್ಟವರೆಗೆ ಅಭಿಯಾನ ರೂಪದಲ್ಲಿ ಹಮ್ಮಿಕೊಳ್ಳಲು ಭಾರತ ಸರ್ಕಾರವು ಆದೇಶಿಸಿದ್ದು, ಸದರಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಸಭೆಯಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆಯನ್ನು ಮಂಡಿಸಲಾಯಿತು.
ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನೊಳಗೊಂಡಂತೆ ಜಿಲ್ಲೆಯಾದ್ಯಂತ ಒಟ್ಟು 1535 ತಂಡಗಳನ್ನು ರಚಿಸಿಕೊಂಡು 2148456 ಜನಸಂಖ್ಯೆಯನ್ನು ಸಮೀಕ್ಷೆಗೊಳಪಡಿಸಲು ಯೋಜಿಸಲಾಗಿದ್ದು, ಸಮೀಕ್ಷೆಯ ಪ್ರತಿ ತಂಡದಲ್ಲಿ ಒಬ್ಬ ಮಹಿಳಾ ಸ್ವಯಂಸೇವಕರು ಹಾಗೂ ಒಬ್ಬ ಪುರುಷ ಸ್ವಯಂಸೇವಕರು ಕಾರ್ಯನಿರ್ವಹಿಸುವರು. ಪ್ರತಿ ಮನೆ-ಮನೆ ಭೇಟಿ ನೀಡಿ ಪ್ರತಿಯೊಬ್ಬ ನಾಗರಿಕರನ್ನು ಪರೀಕ್ಷಿಸಲು ಯೋಜಿಸಲಾಗಿದೆ.
ಸಮೀಕ್ಷೆಯಲ್ಲಿ ಕುಷ್ಠರೋಗಿಗಳನ್ನು ಕಂಡುಹಿಡಿದು ಭಾರತ ಸರ್ಕಾರದ ಗುರಿಯಂತೆ ಜಿಲ್ಲೆಯನ್ನು ಕುಷ್ಠ ಮುಕ್ತವನ್ನಾಗಿಸಲು ಪಣತೊಡಲು ಎಲ್ಲ ಇಲಾಖೆಗಳ ಸಹಭಾಗಿತ್ವವನ್ನು ನೀಡಲು ಕೋರಲಾಯಿತು.
ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳೂ ಸಹ ಈ ಅಭಿಯಾನದಲ್ಲಿ ಭಾಗವಹಿಸಿ ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಲು ನಿರ್ದೇಶನ ನೀಡಿದರು.