ಅನವಶ್ಯಕ ಯಾರಿಗೂ ತೊಂದರೆ ಕೊಡಬೇಡಿ: ಪೊಲೀಸರಿಗೆ ಸೂಚಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಏ. 6, ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿನಿಂದ ಏ. 11ರವರೆಗೆ ಲಾಕ್‌ಡೌನ್ ನಿಂದ ರೈತರ ಹಾಗೂ ಕೃಷಿ ಸ್ಥಿತಿಗತಿ ಅವಲೋಕನಕ್ಕೆ ಖುದ್ದು ಪರಿಶೀಲನೆಗೆ ಮುಂದಾಗಿದ್ದಾರೆ. ಇಂದು ಮೊದಲ ದಿನದ ಪ್ರವಾಸದಲ್ಲಿ ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಮತಕ್ಷೇತ್ರ ಹಿರೇಕೆರೂರು ನಿವಾಸದಿಂದ ಶಿಗ್ಗಾಂ ಮಾರ್ಗವಾಗಿ ಇಂದು ಬೆಳಿಗ್ಗೆನೆ ಸಚಿವರು ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ಕಂಡುಬಂದ ಸಮಸ್ಯೆಗಳತ್ತವೂ ಸಚಿವರು ಗಮನ ಹರಿಸಿದರು. ಈ ವೇಳೆ ಕೆಲವೆಡೆ ಪೊಲೀಸರಿಂದ ಅನವಶ್ಯಕ ತೊಂದರೆ ಕಿರಿಕಿರಿಯುಂಟಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಸಚಿವರು ಮುಂದಾದರು.ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿ ತಡಸ ಚೆಕ್ ಪೊಸ್ಟ್ ಬಳಿ ಪೊಲೀಸರು ಅನವಶ್ಯಕವಾಗಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಸ್ವತಃ ಚೆಕ್ ಪೊಸ್ಟ್ ಗೆ ಭೇಟಿ ನೀಡಿ, ಅನವಶ್ಯಕ ಯಾರಿಗೂ ಯಾವುದೇ ವಾಹನಕ್ಕೂ ತೊಂದರೆಯುಂಟು ಮಾಡಬೇಡಿ ಎಂದು ಪೊಲೀಸರಿಗೆ ಸೂಚಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 