ಮಕ್ಕಳಿಗೆ ತಪ್ಪದೇ ಜಂತುಹುಳು ನಾಶಕ ಮಾತ್ರೆ ನೀಡಿ: ಎಡಿಸಿ ಸೆ.25 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ಮಕ್ಕಳಿಗೆ ತಪ್ಪದೇ ಜಂತುಹುಳು ನಾಶಕ ಮಾತ್ರೆ ನೀಡಿ: ಎಡಿಸಿ   ಸೆ.25 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ಬಾಗಲಕೋಟೆ: ಜಿಲ್ಲೆಯಲ್ಲಿ ಸೆ.25 ರಂದು ರಾಷ್ಟ್ರೀಯ ಜಂತುಹುಳು ನಿರಾವಣಾ ದಿನ ಆಚರಿಸಲಾಗುತ್ತಿದ್ದು, ಅಂದು 1 ರಿಂದ 19 ವರ್ಷದ ಎಲ್ಲ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಗಳನ್ನು ಕಡ್ಡಾಯವಾಗಿ ನೀಡುವಂತೆ ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕುರಿತು ಜರುಗಿದ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಂತುಹುಳು ಇದೊಂದು ಸೋಂಕು ರೋಗವಾಗಿದ್ದು, 1 ರಿಂದ 19 ವರ್ಷದ ಎಲ್ಲ ಮಕ್ಕಳಿಗೆ ಜಂತುಹುಳು ನಾಶಕ ಅಲ್ಬೆಂಡಾಜೋಲ್ ಮಾತ್ರೆಯನ್ನು ನೀಡಬೇಕು. ಈ ಮಾತ್ರೆಗಳನ್ನು ಸಪ್ಟಂಬರ 25 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುತ್ತಿದು, ತಪ್ಪದೇ ಮಕ್ಕಳನ್ನು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಕಳುಹಿಸುವಂತೆ ಪಾಲಕ, ಪೋಷಕರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಹಾಗೂ ಕಾಲೇಜುಗಳಲ್ಲಿ ಇರುವ ಮಕ್ಕಳ ಅಂಕಿ ಸಂಖ್ಯೆಗಳನ್ನು ಕಲೆ ಹಾಕಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಇವುಗಳನ್ನು ಹೊರತುಪಡಿಸಿ ಕೈಗಾರಿಕೆ ತರಬೇತಿ ಕೇಂದ್ರ, ಡಿಪ್ಲೋಮಾ, ನಸರ್ಿಂಗ್ ಕಾಲೇಜಿನಲ್ಲಿರುವ 1 ರಿಂದ 19 ವರ್ಷದೊಳಗಿನ ಒಟ್ಟು 7.05 ಲಕ್ಷ ಮಕ್ಕಳಿರಬಹುದೆಂದು ಅಂದಾಜಿಸಲಾಗಿದೆ. ಯಾವುದೇ ಮಗು ಈ ಮಾತ್ರೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಶಾಲೆ-ಕಾಲೇಜುಗಳಿಂದ ಹೊರಗುಳಿದ ಮಕ್ಕಳನ್ನು ಸಹ ಗುರುತಿಸಿ ಅವರಿಗೆ ಮಾತ್ರೆ ನೀಡಲು ಕ್ರಮಕೈಗೊಳ್ಳಬೇಕು ಎಂದರು. ಸೆ. 25 ರಂದು ಜಂತುಹುಳು ನಿವಾರಣಾ ದಿನದಂದು ಸಮುದಾಯಕ್ಕೆ ಮಾಹಿತಿ ನೀಡಿ ಅಂದು ತಮ್ಮ ಮಕ್ಕಳನ್ನು ಶಾಲೆ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಕಳುಹಿಸುವಂತೆ ಉತ್ತೇಜಿಸಬೇಕು. ಅಲ್ಲದೇ ಜಂತುಹುಳು ನಿವಾರಣಾ ದಿನದಂದು ಜಂತು ನಿವಾರಣೆಗೊಳಪಟ್ಟಿರದ ಮಕ್ಕಳನ್ನು ನಿಮರ್ೂಲನಾ ದಿನವಾದ ಸಪ್ಟಂಬರ 30 ರಂದು ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಉತ್ತೇಜಿಸುವ ಕೆಲಸವಾಗಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಂತುಹುಳು ನಾಶಕ ಮಾತ್ರೆಯನ್ನು ನೀಡುವ ಕುರಿತು ಸಮುದಾಯಕ್ಕೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಕಿಕೊಳ್ಳಬೇಕು. ಗ್ರಾಮ ಪಂಚಾಯತ ಮಟ್ಟದಲ್ಲಿ ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಲಾ ಕಾಲೇಜುಗಳ ಮುಖ್ಯೋಪಾದ್ಯಾಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕತರ್ೆರ ಸಭೆ ಕರೆದು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳುವಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.   

ಜಂತುಹುಳು ಸೋಂಕಿನಿಂದ ಮಕ್ಕಳಲ್ಲಿ ರಕ್ತಹಿನತೆ, ಪೌಷ್ಠಿಕಾಂಶ ಕೊರತೆ, ಹಸಿವುಯಾಗದಿರುವುದು, ನಿಶಕ್ತಿ ಮತ್ತು ಆತಂಕ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಅತಿಸಾರ ಮತ್ತು ತೂಕ ಕಡಿಮೆಯಾಗುತ್ತದೆ. 

    ಹೆಚ್ಚಿನ ಸಂಖ್ಯೆಯಲ್ಲಿ ಜಂತುಹುಳು ಹೊಂದಿದ ಮಗುವಿನಲ್ಲಿ ಲಕ್ಷಣಗಳು ಹೆಚ್ಚಾಗಿರುತ್ತದೆ.   ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದಶರ್ಿ ಎ.ಜಿ.ತೋಟದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರಿ ಉಪನಿದರ್ೇಶ ಎ.ಕೆ.ಬಸಣ್ಣವರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಪ್ರಕಾಶ ಬಿರಾದಾರ, ಜಿಲ್ಲಾ ಮಲೇರಿಯಾ ನಿವಾರಣಾ ಅಧಿಕಾರಿ ಜಯಶ್ರೀ ಎಮ್ಮಿ, ಜಿಲ್ಲಾ ಮಾನಸಿಕ, ಅಂದತ್ವ ಹಾಗೂ ಕುಷ್ಟರೋಗ ನಿವಾರಣಾ ಅಧಿಕಾರಿ ಕುಸುಮಾ ಮಾಗಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಪಟ್ಟಣಶೆಟ್ಟಿ, ಜಿಲ್ಲಾ ಲಸಿಕಾ ಅಧಿಕಾರಿ ಬಿ.ಜಿ.ಹುಬ್ಬಳ್ಳಿ ಸೇರಿದಂತೆ ಆಯಾ ತಾಲೂಕಾ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.


ಸುದ್ದಿ ಓದಿ