ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ: ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ
Do not neglect your health: Former MLA Suryanarayana Reddy
ಬಳ್ಳಾರಿ, ಆ.10: ಪ್ರಸ್ತುತ ದಿನಗಳಲ್ಲಿ ಆಹಾರ ಸೇವನೆಯ ಶೈಲಿ ಹಾಗೂ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಇದರಿಂದ ನಾನಾ ರೀತಿಯ ಕಾಯಿಲೆಗಳು ಎದುರಾಗುತ್ತಿವೆ. ದೇಹಕ್ಕೆ ಶ್ರಮ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಸತ್ವಯುತ ಆಹಾರ ಸೇವನೆಯ ಜೊತೆಗೆ ದೈಹಿಕ ವ್ಯಾಯಾಮ ಮಾಡಿದಾಗ ಮಾತ್ರ ಆರೋಗ್ಯ ಸದೃಢವಾಗಿರುತ್ತದೆ ಎಂದು ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ಹೇಳಿದರು.
ನಗರದ ಬಸವ ಭವನದಲ್ಲಿ ಭಾನುವಾರ ಸಂಜೆ ಭಾರತೀಯ ವೈದ್ಯಕೀಯ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಭಾರತ ರತ್ನ ವೈದ್ಯ ಬಿಧನ್ ಚಂದ್ರ ರಾಯ್ ಸ್ಮರಣಾರ್ಥ ವೈದ್ಯರ ್ತು್ಣೂಸ್ಘ್ಪಾಹಿ2026 ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಮತ್ತು ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯಾವುದೇ ಕಾರಣಕ್ಕೂ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ: ಪ್ರತಾಪ್ ರೆಡ್ಡಿ
ಬುಡಾ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ನಾರಾ ಪ್ರತಾಪ್ ರೆಡ್ಡಿ ಮಾತನಾಡಿ, ವೈದ್ಯರ ದಿನಾಚರಣೆ ಎಂದರೆ ಭಾರತ ರತ್ನ ವೈದ್ಯ ಬಿಧನ್ ಚಂದ್ರ ರಾಯ್ ಅವರ ಸೇವೆಯನ್ನು ಸ್ಮರಿಸುವ ದಿನವಾಗಿದೆ. ವೈದ್ಯರು ವರ್ಷವೀಡೀ ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಈ ವಿಶೇಷ ದಿನದಂದು ಪ್ರತಿಯೊಬ್ಬರೂ ವೈದ್ಯರ ಸೇವೆಯನ್ನು ಸ್ಮರಿಸಿ ಸಂಭ್ರಮಿಸಬೇಕು ಎಂದರು.
ವೈದ್ಯಕೀಯ ಸಂಘಟನೆ ಬಲವಾಗಿದ್ದರೆ ಸಮಸ್ಯೆಗಳಿಗೆ ಪರಿಹಾರ
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ಶಾಖೆ ಅಧ್ಯಕ್ಷ ಡಾ. ಭರತ್ ವಿ.ಜೆ. ಮಾತನಾಡಿ, ಸಂಘಟನೆ ಬಲವಾಗಿದ್ದರೆ ಹಾಗೂ ವೈದ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಬಹುದು. ಒಗ್ಗಟ್ಟಿನಲ್ಲಿ ಬಲವಿದೆ ಎಂದು ಹೇಳಿದರು.
ಪ್ರತಿ ವರ್ಷ ವೈದ್ಯರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಬಾರಿಯೂ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ಸಂಘದ ಎಲ್ಲ ಸದಸ್ಯರ ಸಹಕಾರ ಮತ್ತು ಪ್ರೋತ್ಸಾಹ ಕಾರಣವಾಗಿದೆ. ಮುಂದಿನ ವರ್ಷವೂ ಎಲ್ಲರ ಸಹಕಾರದಿಂದ ಇನ್ನಷ್ಟು ಅದ್ದೂರಿಯಾಗಿ ಕಾರ್ಯಕ್ರಮ ನಡೆಸೋಣ ಎಂದು ಹೇಳಿದರು.
ವೈದ್ಯರು, ಸಮಾಜ ಸೇವಕರು ಹಾಗೂ ಸಾಧಕರಿಗೆ ಸನ್ಮಾನ
ಸಮಾರಂಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ. ಜಿ.ವಿ. ರಾವ್, ಡಾ. ಶ್ರೀನಿವಾಸಲು ಪಿ., ಡಾ. ಭಾಗ್ಯಲಕ್ಷ್ಮೀ, ಡಾ. ಇಂದಿರಾ ರೆಡ್ಡಿ ಹಾಗೂ ಡಾ. ಜೆ. ಶಂಕರ್ ಅವರನ್ನು ಸನ್ಮಾನಿಸಲಾಯಿತು.
ಅತ್ಯುತ್ತಮ ಆರೋಗ್ಯ ಸೇವೆಗಾಗಿ ಗೋಪಿ ಬ್ಲಡ್ ಬ್ಯಾಂಕ್ನ ಗೋಪಾಲ್ ರೆಡ್ಡಿ ಹಾಗೂ ಸಮಾಜ ಸೇವಕರಾದ ಮಂಜು ಮೋದಿ ಅವರಿಗೆ ಸಮಾಜ ಸೇವಾ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೊಸದಿಗಂತ ಜಿಲ್ಲಾ ವರದಿಗಾರ ವೆಂಕಟೇಶ್ ದೇಸಾಯಿ ಅವರಿಗೆ ಅತ್ಯುತ್ತಮ ವರದಿಗಾರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೂ ಗೌರವ
ಎಂಬಿಬಿಎಸ್ನಲ್ಲಿ ಸಾಧನೆ ಮಾಡಿದ ಡಾ. ಮುಸ್ಕಾನ್ ಅಗರವಾಲ್, ನೀಟ್ ಪರೀಕ್ಷೆಯಲ್ಲಿ ಟಾಪರ್ಗಳಾಗಿ ಉನ್ನತ ಸ್ಥಾನ ಪಡೆದ ಕುಮಾರ್ ಶಶೀರ್, ಹೇಮಾದ್ರಿ ಕುಮಾರ್ ಹಾಗೂ ಅಂಶುಮಾನ್ ಯೋಗಾನಂದ ರೆಡ್ಡಿ ಅವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.
ವೈದ್ಯರ ಕುಟುಂಬಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಸಮಾರಂಭದಲ್ಲಿ ಹಿರಿಯ ವೈದ್ಯರಾದ ಡಾ. ಮಹಿಪಾಲ್, ಡಾ. ಬಿ.ಕೆ. ಸುಂದರ್, ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ. ವೈ.ಸಿ. ಯೋಗಾನಂದ ರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಬಿಇಎಆರ್ಸಿ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಮೋರಿಗೇರಿ, ಸಂಘದ ಉಪಾಧ್ಯಕ್ಷ ಡಾ. ಸಾದತ್ ಹುಸೇನ್, ಗೌರವ ಕಾರ್ಯದರ್ಶಿ ಡಾ. ಪಿ. ಹರೀಶ್, ಜಂಟಿ ಕಾರ್ಯದರ್ಶಿ ಡಾ. ಮೇದಿನಿ, ಖಜಾಂಚಿ ಡಾ. ರಾಕೇಶ್ ಕೆ. ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಡಾ. ಸುಷ್ಮಾ ಗುಡಿ, ಗೌರವ ಕಾರ್ಯದರ್ಶಿ ಡಾ. ಶೋಭಾ, ಖಜಾಂಚಿ ಡಾ. ಅನುರಾಧಾ ಸೋಮಶೇಖರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ವೈದ್ಯರು ಹಾಗೂ ಅವರ ಕುಟುಂಬದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 