ವಿ. ಗಂಗೋತ್ರಿಗೆ ಡಾಕ್ಟರೇಟ್ ಪದವಿ
ಬಳ್ಳಾರಿ 22 : ನಗರದ ಕೌಲ್ಬಜಾರ್ ಪ್ರದೇಶದ ಬಂಡಿಹಟ್ಟಿ ನಿವಾಸಿ ವಿ.ಗಂಗೋತ್ರಿ ಅವರಿಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿಯನ್ನು ಘೋಷಿಸಿದೆ.
ವಿ.ಗಂಗೋತ್ರಿ ಅವರು ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ತಿಪ್ಪೇಸ್ವಾಮಿ.ಹೆಚ್ ಅವರ ಮಾರ್ಗದರ್ಶನದಲ್ಲಿ ಗ್ರೇಟ್ ಮೆಟ್ರೋಪಾಲಿಟನ್ ಸಿಟಿ ಆಫ್ ಹಂಪಿ ಹಿಸ್ಟಾರಿಕಲ್ ಸ್ಟಡಿ ಎಂಬ ಶೀರ್ಷಿಕೆಯಡಿ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿಯನ್ನು ಘೋಷಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.