ಕಡಬಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಣೆ : ವೈದ್ಯರಿಗೆ ಗೌರವ
Doctors' Day celebrated at Kadabi Government Hospital: Tribute to doctors
ಲೋಕದರ್ಶನ ವರದಿ
ಯರಗಟ್ಟಿ 01 : ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಕಡಬಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ ಕಡಬಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಕಾರ್ತಿಕ ವಾಲಿ ಅವರನ್ನು ಶಾಲು, ಹಾರ ಹಾಗೂ ಫಲತಟ್ಟೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಆಸ್ಪತ್ರೆ ಆವರಣದಲ್ಲಿ ವೃಕ್ಷಾರೋಪಣೆಯನ್ನೂ ನಡೆಸಲಾಯಿತು. ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ ಮಾತನಾಡಿ "ವೈದ್ಯರು ಸಮಾಜದ ಆರೋಗ್ಯ ಕಾಪಾಡುವ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 